HD Kumaraswamy: ರಾಜ್ಯದ ಜನರಿಗೆ ʼಪಂಚ ಗ್ಯಾರಂಟಿʼ ಭಾಗ್ಯಗಳನ್ನು ನೀಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ದರ ಏರಿಕೆ ಭಾಗ್ಯವನ್ನು ಕರುಣಿಸಿದೆ. ಮೆಟ್ರೋ ದರ, ವಿದ್ಯುತ್ ದರ, ಹಾಲಿನ ದರ ಏರಿಕೆ, ಕಸ ಸಂಗ್ರಹಣೆಗೂ ಶುಲ್ಕ ವಿಧಿಸುವ ನಿರ್ಧಾರದ ಬಳಿಕ ಇದೀಗ ಏಕಾಏಕಿ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಲಾಗಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ.2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ನೀಡಿದ್ದು, ರಾಜ್ಯದಲ್ಲಿ ಡೀಸೆಲ್ ಮತ್ತಷ್ಟು ದುಬಾರಿಯಾಗಲಿದೆ.
ಏಪ್ರಿಲ್ ಒಂದರಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್ ದರವನ್ನು 2 ರೂ. ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ʼದರ ಬೀಜಾಸುರ ಸರ್ಕಾರʼ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸಹಿ ಹಾಕ್ಲಿಲ್ಲ ಅಂದ್ರೆ ಬಾಂಬ್ ಹಾಕ್ತೀನಿ: ಡೊನಾಲ್ಡ್ ಟ್ರಂಪ್
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್‌ಡಿಕೆ, ʼಡೀಸೆಲ್ ದರ ಲೀಟರಿಗೆ ₹2 ಏರಿಕೆ!! ಜನಪೀಡಕ ದರ ಬೀಜಾಸುರ ಸರ್ಕಾರದಿಂದ ರಾಜ್ಯದ ಜನತೆಗೆ ಇನ್ನೊಂದು ಶಾಕ್!! ಕಳೆದ ಹತ್ತು ತಿಂಗಳಲ್ಲಿ ಡಿಸೇಲ್ ಪ್ರತಿ ಲೀಟರಿಗೆ ₹5 ಏರಿಕೆ ಭಾಗ್ಯ ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ!! ಯುಗಾದಿ ಹೊಸ ತೊಡಕು ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರಕಾರ ವಿಜೃಂಭಿಸಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
?ಡೀಸೆಲ್ ದರ ಲೀಟರಿಗೆ ₹2 ಏರಿಕೆ!!
ಜನಪೀಡಕ ದರ ಬೀಜಾಸುರ ಸರಕಾರದಿಂದ ರಾಜ್ಯದ ಜನತೆಗೆ ಇನ್ನೊಂದು ಶಾಕ್!!
ಕಳೆದ ಹತ್ತು ತಿಂಗಳಲ್ಲಿ ಡಿಸೇಲ್ ಪ್ರತಿ ಲೀಟರಿಗೆ ₹5 ಏರಿಕೆ ಭಾಗ್ಯ ಕೊಟ್ಟ ರಾಜ್ಯ ಕಾಂಗ್ರೆಸ್ ಸರಕಾರ!!
ಯುಗಾದಿ ಹೊಸ ತೊಡಕು ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರಕಾರ ವಿಜೃಂಭಿಸಿದೆ.
ಬೆಳಗ್ಗೆ ನಿದ್ರೆಯಿಂದ… pic.twitter.com/681kHxW5sh
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 1, 2025
ʼಬೆಳಗ್ಗೆ ನಿದ್ರೆಯಿಂದ ಜನರೆದ್ದರೆ ಸುಲಿಗೆ ಬರೆ ಹಾಕುತ್ತಿದೆ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಕೈ ಕಂಪನಿ ಸರ್ಕಾರಕ್ಕೆ ಕಣ್ಣಿಲ್ಲ, ಕರುಣೆಯೂ ಇಲ್ಲ. ಕಿತ್ತು ತಿನ್ನುವ ವಿಕೃತಿಯನ್ನು ಹತ್ತಿಕ್ಕಲು ಜನರು ಬೀದಿಗಿಳಿದು ದಂಗೆ ಎಳದೇ ವಿಧಿ ಇಲ್ಲʼವೆಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರೊಟೆಸ್ಟ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









