ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಮ್ಮೆ ಶೇ.60ರಷ್ಟು ಕಮಿಷನ್ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನ ಟ್ಯಾಗ್ ಮಾಡಿ ಸರ್ಕಾರದ ವಿರುದ್ಧ ಪರ್ಸಂಟೇಜ್ ದಾಳಿ ಮಾಡಿದ್ದಾರೆ. ಇಲ್ಲಿದೆ ನೋಡಿ ನಿಮ್ಮ ಲೂಟಿ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ʼದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸಿಎಂ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..?ʼ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ನಡೆಸಲು ಸಾಧ್ಯವಾಗ್ತಿಲ್ಲ
ʼಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆʼ ಎಂದು ಎಚ್‌ಡಿಕೆ ಕಳವಳ ವ್ಯಕ್ತಪಡಿಸಿದ್ದಾರೆ.
ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ @siddaramaiah ನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!!
ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ… pic.twitter.com/K9MxF63j34
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2025
ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ.. ಜಲ ಸಂಪನ್ಮೂಲ: ₹14,600 ಕೋಟಿ, ಲೋಕೋಪಯೋಗಿ: ₹10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ₹3,100 ಕೋಟಿ, ಸಣ್ಣ ನೀರಾವರಿ: ₹2,800 ಕೋಟಿ, ಇತರೆ ಇಲಾಖೆ: ₹1,500 ಕೋಟಿ ಸೇರಿ ಒಟ್ಟು: ₹32,000 ಕೋಟಿ ಬಾಕಿ ಇದೆ ಅಂತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಈಗಾಗಲೇ ಸರ್ಕಾರ ಆದೇಶಿಸಿದೆ, ಲೀಗಲ್ ಟೀಮ್‌ಗೆ ಹೇಳಿದೆ
ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲವೆಂದು ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಕಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.