ಬೆಂಗಳೂರು: ರಾಜ್ಯದಲ್ಲಿ ಆಗುತ್ತಿರುವ ಭ್ರಷ್ಟಾಚಾರ, ಅಕ್ರಮಗಳನ್ನು ಬದಿಗಿಟ್ಟು ತಮ್ಮ ಭಾಷೆಯ, ಮಾನಸಿಕ ಸ್ಥಿತಿಯ ಬಗ್ಗೆ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದ್ದಾರೆ. ಗುತ್ತಿಗೆದಾರರಿಂದ ಕಾಂಗ್ರೆಸ್ ಟ್ಯಾಕ್ಸ್ ಹಾಗೂ ವೈಎಸ್‍ಟಿ ಟ್ಯಾಕ್ಸ್ ಸಂಗ್ರಹ ಮಾಡಲಾಗುತ್ತಿದೆ ಎಂದು ಪುನರುಚ್ಚರಿಸಿರುವ ಅವರು, ವೈಎಸ್‍ಟಿ ಟ್ಯಾಕ್ಸ್ ಜೊತೆಗೆ ಕಾಂಗ್ರೆಸ್ ಟ್ಯಾಕ್ಸ್ ಹೆಸರನ್ನು ಉಲ್ಲೇಖ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ ‘ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ!' ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು, ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂತಹ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ?’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ: ಯಾವ ಪುರುಷಾರ್ಥಕ್ಕೆ ಎಂದು ಬಿಜೆಪಿ ಆಕ್ರೋಶ


‘ಈಗ ವಿಷಯಾಂತರ ಮಾಡಿ ಕುಮಾರಸ್ವಾಮಿಯ ಟೀಕೆ, ಭಾಷೆ, ಅರೋಪ ಇಟ್ಟುಕೊಂಡು ಅನುಕಂಪ ಗಿಟ್ಟಿಸಲು ಹೊರಟಿದ್ದೀರಿ! ಆದರೆ, ಅನುದಿನವೂ ವರ್ಗಾವಣೆ, ಕಮೀಷನ್ ದಂಧೆಯಲ್ಲಿ ಬೇಯುತ್ತಿರುವವರ ಕರುಣಾಜನಕ ಕಥೆಗಳಿಗೆ ಕೊನೆ ಎಂದು? ನಿಮ್ಮ ಹಣದ ಹಪಾಹಪಿ, ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ?’ ಎಂದು ಸಿಎಂ ಸಿದ್ದರಾಮಯ್ಯಗೆ ಎಚ್‍ಡಿಕೆ ಪ್ರಶ್ನಿಸಿದ್ದಾರೆ.


ಇಂತಹ ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ ಸಿದ್ದರಾಮಯ್ಯನವರೇ? ಸರಕಾರಿ ಉದ್ಯೋಗಿಗಳು, ಅವರ ಕುಟುಂಬದವರ ಕಣ್ಣೀರಿನ ಶಾಪ ನಿಮಗೆ ತಟ್ಟದಿರುವುದೇ? ಮಾನಸಿಕ ಸ್ಥಿಮಿತತೆ ಎಂದರೆ ಸರಕಾರಿ ಉದ್ಯೋಗಿಗಳನ್ನು ಕಾಸಿಗಾಗಿ ಎಡೆಬಿಡದೆ ಕಾಡುವುದೇ? ಅಥವಾ ಇದೇನಾ ಸಾಮಾಜಿಕ ನ್ಯಾಯ? ನುಡಿದಂತೆ ನಡೆಯುವುದು ಎಂದರೆ ಇದೇನಾ?’ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ


‘ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ 'ಸಿದ್ದಕಲೆ' ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಮುಖ್ಯಮಂತ್ರಿ ಕಚೇರಿಯ ಐದಾರು ಟಿಪ್ಪಣಿಗಳು 'ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ' ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ!’ ಎಂದು ಕುಟುಕಿದ್ದಾರೆ.


‘ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ’ ಎಚ್‍ಡಿಕೆ ಟೀಕಿಸಿದ್ದಾರೆ.   


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.