ಹಾಸನ: ಇನ್ನೊಂದು ವಾರ ನಾನು ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಕಾರಣ ನಾವೆಲ್ಲರೂ ಈಗ ಚಂದ್ರಯಾನ ಯಶಸ್ಸಿನ ಗುಂಗಿನಲ್ಲೇ ಇದ್ದೇವೆ. ಇವತ್ತು ದೇಶ-ವಿದೇಶಗಳಲ್ಲಿ ಚಂದ್ರಯಾನದ ಬಗ್ಗೆಯೇ ದೊಡ್ಡಮಟ್ಟದ ಚರ್ಚೆಗಳು ನಡೆಯುತ್ತಿವೆ, ಪ್ರಶಂಸೆಗಳು ಬರುತ್ತಿವೆ. ಎಲ್ಲರ ಗಮನ ಆ ಕಡೆಯೇ ಇದೆ. ಹೀಗಾಗಿ ನಾನು 1 ವಾರ ರಾಜಕಾರಣದ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನಿಗಳ ಅವಿರತ ಶ್ರಮದಿಂದ ದೇಶದ ಪ್ರತಿಷ್ಠೆಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಇವತ್ತು ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಹೋಗಿದ್ದಾರೆ. ಹೀಗಾಗಿ ರಾಜಕಾರಣ ಬಗ್ಗೆ ಹೆಚ್ಚಿಗೆ ಚರ್ಚೆ ಮಾಡಲು ಹೋಗಲ್ಲ ಎಂದು ಹೇಳಿದರು.


ಇದನ್ನೂ ಓದಿ: ನ.17ರೊಳಗೆ HSRP ನಂಬರ್ ಪ್ಲೇಟ್ ಕಡ್ಡಾಯ!


ನೀವು ಸರ್ಕಾರದ ಬಗ್ಗೆ ಕಠಿಣವಾಗಿ ಮಾತನಾಡುವುದು ಬೇಡ, ಇವರು ತಪ್ಪುಗಳನ್ನು ಮಾಡಿಕೊಂಡು ಹೋಗಲಿ ಬಿಟ್ಟುಬಿಡಿ ಎಂದು ಬಹಳಷ್ಟು ಜನ ಹೇಳುತ್ತಿದ್ದಾರೆ. ಹಾಗಂತ ಬಿಟ್ಟುಬಿಟ್ಟರೆ ಇವರಿಗೆ ಹೇಳೋರು ಕೇಳೋರು ಇರುವುದಿಲ್ಲ, ಆ ಪರಿಸ್ಥಿತಿಗೆ ಬಂದು ಬಿಡ್ತಾರೆ. ಈಗಲೇ ಹೇಳೋರು, ಕೇಳೋರು ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‍ಡಿಕೆ ಟೀಕಾಪ್ರಹಾರ ನಡೆಸಿದರು.


ಅನಧಿಕೃತವಾಗಿ ಲೋಡ್ ಶೆಡ್ಡಿಂಗ್!


ನಾನು ಸರ್ಕಾರಕ್ಕೆ ಹೇಳುವುದು ಇಷ್ಟೇ. ನಿಮ್ಮ‌ ಗ್ಯಾರಂಟಿ ಯೋಜನೆಗಳನ್ನು ಮಾಡಿಕೊಂಡು ಹೋಗಿ, ಸಂತೋಷ. ಅದು ಎಷ್ಟರಮಟ್ಟಿಗೆ ನಿಮ್ಮ ಗ್ಯಾರಂಟಿ ಸ್ಕೀಂಗಳಿಂದ ಇಡೀ ನಾಡಿನ ಜನತೆಗೆ ಅನೂಕೂಲ ಆಗುತ್ತಿದೆ ಎಂಬುದನ್ನು ಕಾದು ನೋಡೋಣ. ಅದಾನಿ, ಅಂಬಾನಿಗೆ ಸೇರುವ ದುಡ್ಡನ್ನು ಪ್ರತಿಯೊಬ್ಬರಿಗೂ ಹಂಚುತಿದ್ದೇವೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದ್ಯಾರಿಗೆ ಹಂಚುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಗೃಹಜ್ಯೋತಿ ಹೆಸರಿನಲ್ಲಿ ಜನರಿಗೆ ಟೋಪಿ ಹಾಕುವುದುನ್ನು ಪ್ರತಿನಿತ್ಯ ಕಾಣುತ್ತಿದ್ದೇವೆ. ಈಗಾಗಲೇ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಮಂತ್ರಿಗಳು ಲೋಡ್ ಶೆಡ್ಡಿಂಗ್ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಯಾವ ಸಮಯದಲ್ಲಿ ವಿದ್ಯುತ್ ಕೊಡುತ್ತಾರೆ ಎಂದು ಹಳ್ಳಿ‌ಜನ ಕಾಯುತ್ತಾ ಕೂರಬೇಕಿದೆ ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಚಾಟಿ ಬೀಸಿದರು.


ಇದನ್ನೂ ಓದಿ: ಬಿಜೆಪಿ ನಾಯಕರ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ವ್ಯಂಗ್ಯ!


ಅನಧಿಕೃತ ಲೋಡ್ ಶೆಡ್ಡಿಂಗ್‍ಗೆ ಯಾವುದೇ ರೀತಿಯ ಸಿದ್ಧತೆಗಳಿಲ್ಲ, ಮುಂದೆ ಆಗುವ ಸಮಸ್ಯೆಗಳ ಬಗ್ಗೆ ಚಿಂತನೆಯೂ ಇಲ್ಲ. ಮೊದಲು ರೈತರ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಯೋಚನೆ ಮಾಡಬೇಕಿತ್ತು. 130 ತಾಲೂಕುಗಳಲ್ಲಿ ಬರದ ಛಾಯೆ ಮೂಡಿದೆ ಅಂತಾ ಕೃಷಿಮಂತ್ರಿಗಳೇ ಹೇಳೀದ್ದಾರೆ. ಭಿತ್ತನೆ ಸಂಪೂರ್ಣ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಗ್ಯಾರಂಟಿ ಎಂದು ವಿಜೃಂಭಿಸುವುದನ್ನು ಬಿಟ್ಟು ಮೊದಲು ರೈತರ ಬದುಕು ಏನಾಗಿದೆ ಎಂಬುದನ್ನು ನೋಡಲಿ ಎಂದು ಒತ್ತಾಯಿಸಿದರು.


ಕಾವೇರಿ ಮತ್ತು ನಮ್ಮ ರೈತರ ಹಿತ ರಕ್ಷಿಸಿ


ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ನಮ್ಮ ರೈತರ ಹಿತವನ್ನು ಕಡೆಗಣಿಸಿದೆ. ಸರ್ವಪಕ್ಷದ ಸಭೆಯಲ್ಲೂ‌ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯವನ್ನು ನೇರವಾಗಿ ಹೇಳಿದ್ದೇನೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀರು ಬಿಡಿ ಎಂದಾಗಲೇ ಸರ್ವಪಕ್ಷದ ಸಭೆ ಕರೆದು ಚರ್ಚೆ ಮಾಡಬೇಕಿತ್ತು. ಸುಪ್ರೀಂಕೋರ್ಟ್‌ಗೆ ತಮಿಳುನಾಡಿನವರು ಅರ್ಜಿ ಹಾಕಿಕೊಂಡಾಗ ತೀರ್ಪು ಬರುವವರೆಗೂ ಕಾಯಬೇಕಿತ್ತು. ಏಕಾಏಕಿ ನೀರು ಬಿಟ್ಟುಬಿಟ್ಟರು, ನಂತರ ರೈತರು ಪ್ರತಿಭಟನೆ ಮಾಡಲು ಹೋದಾಗ ‘ನೀವು ಕೋರ್ಟ್‌ಗೆ ಕೇಸ್ ಹಾಕಿಕೊಳ್ಳಿʼ ಎಂದು ಡಿಸಿಎಂ ಡಿಕೆಶಿ ಹೇಳಿದರು. ಇಂತಹ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ ಎಂದು ಸಭೆಯಲ್ಲಿ ನೇರವಾಗಿಯೇ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.