ಬೆಂಗಳೂರು: ಸಾಕ್ಷ್ಯನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಸಿದ್ದರಾಮಯ್ಯರ ಪತ್ನಿಯವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮುಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. 


COMMERCIAL BREAK
SCROLL TO CONTINUE READING

ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.


ಇದನ್ನೂ ಓದಿ: ಮುಡಾ ಟೆನ್ಶನ್ ಮಧ್ಯೆ ದಸರಾ ಉದ್ಘಾಟನೆಗೆ ತೆರಳಿರುವ ಸಿಎಂ


ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡು ECR ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರದ ದಿನ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲಾ ನಿವೇಶನಗಳು ಮುಡಾ ವಶಕ್ಕೆ ಹೋಗಿವೆ. ಹದಿನಾಲ್ಕು ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ ಎಂದು ಕುಮಾರಸ್ವಾಮಿ ಹೇಳಿದರು.


ಇದೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಯಾಲಗಳ ಆದೇಶಗಳಿವೆ. ಹೀಗಿದ್ದೂ ಮೂಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರದ ದುರುಪಯೋಗ ಮಾಡಿದ್ದಾರೆ.  ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮೂಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ಶಿಸಿದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದರು.


ಇದನ್ನೂ ಓದಿ:ರಾಮಾರೂಢ ಮಠದ ಶ್ರೀಗಳಿಗೆ ವಂಚಿಸಿದ್ದ ಹಣ ವಶಕ್ಕೆ ಪಡೆದ ಪೊಲೀಸರು!


ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು.  ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್ ನಲ್ಲಿ  ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದರು. ಅವುಗಳ ಮೌಲ್ಯ ₹62 ಕೋಟಿ ಎಂದರು. ಇಷ್ಟಕ್ಕೂ ಮೂಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ದೂರಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.