ಭಾಷಣ ಒಂದು, ರಾಜಕಾರಣ ಇನ್ನೊಂದು; ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ- ಎಚ್‍ಡಿಕೆ
‘ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ‘ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
‘ಭಾಷಣ ಒಂದು, ರಾಜಕಾರಣ ಇನ್ನೊಂದು!!', ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. 5 ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ?’ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಎದುರು ಡಿಕೆಶಿ ಅಸಹಾಯಕರಾಗಿ ನಿಲ್ಲಬೇಕಷ್ಟೆ!: ಬಿಜೆಪಿ ವ್ಯಂಗ್ಯ
‘ರಾಮನ ಹೆಸರು, ರಾವಣ ರಾಜಕೀಯ!! ನಿಮಗೆ ನೀವೇ ಸಾಟಿ. ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ, ಜಾತಿಗೊಂದು ಸಮಾವೇಶ ನಡೆಸಿಕೊಂಡು ಅಲ್ಪಸಂಖ್ಯಾತ ವ್ಯಕ್ತಿಯನ್ನು 2ನೇ ಅಭ್ಯರ್ಥಿ ಮಾಡಿದ ಒಳಗುಟ್ಟು ಏನು? ಆಪರೇಶನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ?’ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಡೀಲ್ ರಾಜಕೀಯ ಬಿಜೆಪಿಯವರ ಮನೆದೇವರಾಗಿಬಿಟ್ಟಿದೆ: ಕಾಂಗ್ರೆಸ್ ಟೀಕೆ
ಆಪರೇಶನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯೆತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? #ಕಾಂಗ್ರೆಸ್_ಬಿಜೆಪಿ_ಭಾಯಿ_ಭಾಯಿ #ಆಪರೇಶನ್_ಕಮಲಯ್ಯ’ ಎಂದು ಎಚ್‍ಡಿಕೆ ವ್ಯಂಗ್ಯವಾಡಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.