ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ, ‘ಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ: ಎಚ್ಡಿಕೆ
ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರ್ಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ‘ಆಪರೇಷನ್ ಹಸ್ತʼ ನಡೆಯುತ್ತಿದೆ ಅಂತಾ ಕುಮಾರಸ್ವಾಮಿ ಕುಟುಕಿದ್ದಾರೆ.
ಬೆಂಗಳೂರು: ಜೆಡಿಎಸ್(JDS) ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ‘ಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಬುಧವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹೆಸರು ಹೇಳದೆ ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ‘ಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ‘ಗೊಬೆಲಪ್ಪ’ನ ‘ಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ‘ಕೃತಘ್ನʼತೆಗೆ ಇದೇ ಸಾಕ್ಷಿ’ ಎಂದು ಸಿದ್ದರಾಮಯ್ಯ(Siddaramaiah)ಗೆ ಟಾಂಗ್ ನೀಡಿದ್ದಾರೆ.
ಆಂಟೋನಿಯೋ ಮೈನೋ ಕೃಪೆಗಾಗಿ ಹುಟ್ಟಿದ ಧರ್ಮವನ್ನೇ ತುಳಿಯುತ್ತೀರಾ?: ಡಿಕೆಶಿ-ಸಿದ್ದುಗೆ ಬಿಜೆಪಿ ಪ್ರಶ್ನೆ
‘ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ‘ಬ್ರೂಟಸ್ ಮನಃಸ್ಥಿತಿʼ, ‘ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲ(Operation Kamala)ದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರ್ಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ‘ಆಪರೇಷನ್ ಹಸ್ತʼ ನಡೆಯುತ್ತಿದೆ’ ಅಂತಾ ಕುಮಾರಸ್ವಾಮಿ ಕುಟುಕಿದ್ದಾರೆ.
‘ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ‘ಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್(Congress), ಈಗ ‘ಅಭಿನವ ಅರಸುʼ ಎಂದು ಪುಂಗಿ ಬಿಡುವ ‘ಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ’ವೆಂದು ಎಚ್ ಡಿಕೆ ಕಿಡಿಕಾರಿದ್ದಾರೆ.
Anti Conversion Bill: ಮತಾಂತರ ನಿಷೇಧ ವಿಧೇಯಕದ ಪ್ರತಿ ಹರಿದುಹಾಕಿದ ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ
‘ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ‘ಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ‘ಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ’ವೆಂದು ಅವರು ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.