ಬೆಂಗಳೂರು : ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕನ್ನಡ, ಸಂಸ್ಕೃತಿ ಇಲಾಖೆಯಿಂದ ನನಗೆ ಓದಿನ ರುಚಿ ಹತ್ತಿದೆ: ಸಚಿವ ಶಿವರಾಜ್ ತಂಗಡಗಿ


ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಳ ಹಿನ್ನೆಲೆಯಲ್ಲಿ ಹೆಚ್ಚಿದ ಡೆಂಗ್ಯೂ ಅಪಾಯ


ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಇದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.