ಬೆಂಗಳೂರು: ಮೇಕೆದಾಟು ಯೋಜನೆ(Mekedatu Project)ಯ ವಿಚಾರವನ್ನಿಟ್ಟುಕೊಂಡು ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಚುನಾವಣಾ ಆಟವನ್ನಾಡುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಆರೋಪಿಸಿದ್ದಾರೆ. #ರಾಷ್ಟ್ರೀಯ_ಪಕ್ಷಗಳ_ಮೇಕೆದಾಟು_ಮಕ್ಮಲ್‌ಟೋಪಿ ಹ್ಯಾಶ್ ಟ್ಯಾಗ್ ಬಳಿಸಿ ಅವರು ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

‘ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌(Gajendra Singh Shekhawat)ಹೇಳಿದ್ದಾರೆ. ಅವರೇ ‘ವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ‘ಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ’ ಅಂತಾ ಟೀಕಿಸಿದ್ದಾರೆ.


ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕ ಬಸ್ ವ್ಯವಸ್ಥೆ..!


‘ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆ(Mekedatu Congress Padayatre)ಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ‘ಚುನಾವಣಾ ಆಟʼ ಶುರು ಮಾಡಿವೆ’ ಅಂತಾ ಕುಟುಕಿದ್ದಾರೆ.


Gajendra Singh Shekhawat) ಅವರು, ‘ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ’ ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲವೇ?’ ಅಂತಾ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: Fire Accident : ಬೆಳ್ಳಂ ಬೆಳಿಗ್ಗೆ ಬೆಂಕಿ ಅವಘಡ : ಹೊತ್ತಿ ಉರಿದ ಗ್ಯಾಸ್ ಬುಕ್ಕಿಂಗ್ ಕಟ್ಟಡ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.