ಬಸ್ ದುರಂತ: ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ ಎಂದ ಎಚ್​ಡಿಕೆ

ಗ್ರಾಮೀಣ ಸಾರಿಗೆಯನ್ನು ಉತ್ತಮಪಡಿಸುವ ಸರ್ಕಾರದ ಮಾತುಗಳು ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ ಅಂತಾ ಎಚ್​ಡಿಕೆ ಟ್ವೀಟ್ ಮಾಡಿದ್ದಾರೆ.

Written by - Zee Kannada News Desk | Last Updated : Mar 19, 2022, 02:09 PM IST
  • ಖಾಸಗಿ ಬಸ್ ಅಪಘಾತಕ್ಕೀಡಾಗಿ 8 ಪ್ರಯಾಣಿಕರು ಸಾವನ್ನಪ್ಪಿರುವುದು ತೀವ್ರ ಆಘಾತವನ್ನುಂಟು ಮಾಡಿದೆ
  • ಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು
  • ದುರಂತದಲ್ಲಿ ಸಾವನ್ನಪ್ಪಿದವರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡಬೇಕೆಂದು ಕುಮಾರಸ್ವಾಮಿ ಆಗ್ರಹ
ಬಸ್ ದುರಂತ: ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ ಎಂದ ಎಚ್​ಡಿಕೆ title=
ಸಾರಿಗೆ ಇಲಾಖೆ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಬಸ್ ದುರಂತಕ್ಕೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy)ಸಾರಿಗೆ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ 8 ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ’ ಅಂತಾ ಹೇಳಿದ್ದಾರೆ.

‘ಸಾರಿಗೆ ಸಚಿವರು(Minister of Transport) ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ದುರಂತದಲ್ಲಿ ಸಾವನ್ನಪ್ಪಿದವರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಅವರಿಗೂ ಪರಿಹಾರ ಕೊಡಬೇಕು’ ಅಂತಾ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Breaking News: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ 8 ಮಂದಿ ದುರ್ಮರಣ!

‘ಖಾಸಗಿ ಬಸ್(Private Bus)ಗಳ ಗುಣಮಟ್ಟ, ಪರವಾನಗಿ, ತಾಂತ್ರಿಕ ಕ್ಷಮತೆ, ವೇಗದ ಚಾಲನೆ ಇತ್ಯಾದಿಗಳ ಬಗ್ಗೆ ನಿರಂತರವಾಗಿ ದೂರು ಬರುತ್ತಲೇ ಇದ್ದರೂ ಸರ್ಕಾರವು ನಿರ್ಲಕ್ಷ್ಯ ಧೋರಣೆಯಲ್ಲೇ ಇದೆ. ಗ್ರಾಮೀಣ ಸಾರಿಗೆಯನ್ನು ಉತ್ತಮಪಡಿಸುವ ಸರ್ಕಾರದ ಮಾತುಗಳು ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ’ ಅಂತಾ ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

‘ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ(Palavalli Katte Bus Accident) ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ’ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ವಿಚಾರ: ಕಾಂಗ್ರೆಸ್ ಟೀಕೆಗೆ ಬಿಜೆಪಿ ತಿರುಗೇಟು

‘ಈ ಬಗ್ಗೆ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಅಂತಾ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News