ಬೆಂಗಳೂರು: ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ಭಾವುಟ ಸುಟ್ಟಿದ್ದು, ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
‘ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ. ಶಿವಾಜಿ ಪ್ರತಿಮೆ(Shivaji Statue) ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ?’ ಅಂತಾ ಎಚ್ಡಿಕೆ ಪ್ರಶ್ನಿಸಿದ್ದಾರೆ.
ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ? 2/5
— H D Kumaraswamy (@hd_kumaraswamy) December 19, 2021
ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಖಂಡನೀಯ: ಪುಂಡರನ್ನು ಸದೆಬಡಿಯುತ್ತೇವೆ ಎಂದ ಸಿಎಂ ಬೊಮ್ಮಾಯಿ
‘ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ(Sangolli Rayanna) ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು?’ ಅಂತಾ ಅವರು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? 4/5
— H D Kumaraswamy (@hd_kumaraswamy) December 19, 2021
‘ವಿಕೃತ ಮನಸ್ಸು ಯಾರದ್ದು ಎನ್ನುವುದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲಯಾಕೆ?’ ಅಂತಾ ಎಚ್ಡಿಕೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಭೂ ಹಗರಣ: ಬೈರತಿ ಬಸವರಾಜು ರಾಜೀನಾಮೆಗೆ ಸಿದ್ಧರಾಮಯ್ಯ ಆಗ್ರಹ
ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ. 5/5
— H D Kumaraswamy (@hd_kumaraswamy) December 19, 2021
‘ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ(MES Belagavi). ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ’ ಅಂತಾ ಎಚ್ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.