ಶ್ರೀನಿವಾಸ್ ಗೌಡ ಅಡ್ಡಮತದಾನ: ಮಾನಮರ್ಯಾದೆ ಇದ್ದರೆ ರಾಜಕಾರಣ ಮಾಡಲಿ ಎಂದು ಎಚ್‌ಡಿಕೆ ಆಕ್ರೋಶ

ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆಯೂ ಇಲ್ಲವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Jun 10, 2022, 02:47 PM IST
  • ಕಾಂಗ್ರೆಸ್ ಪರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅಡ್ಡಮತದಾನ ವಿಚಾರ
  • ಮಾನಮರ್ಯಾದೆ ಇದ್ದರೆ ರಾಜಕಾರಣ ಮಾಡಲಿ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
  • ಕಾಂಗ್ರೆಸ್ ನಾಯಕರಿಗೆ ಯಾವುದೇ ನೈತಿಕತೆ ಇಲ್ಲವೆಂದು ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಗುಡುಗು
ಶ್ರೀನಿವಾಸ್ ಗೌಡ ಅಡ್ಡಮತದಾನ: ಮಾನಮರ್ಯಾದೆ ಇದ್ದರೆ ರಾಜಕಾರಣ ಮಾಡಲಿ ಎಂದು ಎಚ್‌ಡಿಕೆ ಆಕ್ರೋಶ title=
ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಗುಡುಗು

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ ಪರ ಅಡ್ಡಮತದಾನ ಮಾಡಿದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನಮರ್ಯಾದೆ ಇದ್ದರೆ ರಾಜಕಾರಣ ಮಾಡಲಿ. ಇಂತಹ ಕೆಲಸ ಮಾಡಬಾರದು, ಇದು ಜೆಡಿಎಸ್ ಕಾರ್ಯಕರ್ತರಿಗೆ ಮಾಡಿದ ಅವಮಾನ. ಆ ಮನುಷ್ಯನಿಗೆ ಮಾನಮರ್ಯಾದೆ ಇದ್ಯಾ? ಅಂತಾ ಕೋಲಾರದ ಗುಬ್ಬಿ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಎಚ್‍ಡಿಕೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ: ಮದುವೆಗೆ ನಿರಾಕರಿಸಿದ ಮಹಿಳೆ ಮೇಲೆ ಆ್ಯಸಿಡ್ ದಾಳಿ

ಸಿದ್ದರಾಮಯ್ಯ ವಿರುದ್ಧ ಆಕ್ರೋಶ

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮಾಡುವುದನ್ನೇ ಇವರು‌ ಮಾಡ್ತಾರೆ. ಬಿಜೆಪಿ ಗೆಲ್ಲಿಸಲು ಹೋಗುತ್ತಿರುವ ನೀವು ಗೆಲ್ತೀರಾ..? ಯಾವ ಮುಖ ಇಟ್ಟು ಬಿಜೆಪಿ ಬಗ್ಗೆ ಮಾತನಾಡ್ತೀರಾ..? ನಿಮ್ಮ ಆಟವನ್ನು ರಾಜ್ಯದ ಜನರು ನೋಡುತ್ತಿದ್ದಾರೆ. ಬಿಜೆಪಿ ಗೆಲ್ಲಿಸೋಕೆ ಯಾಕೆ ಹೀಗೆ ಮಾಡ್ತೀರಾ..? ಬಿಜೆಪಿ ಮತ್ತು ನಿಮ್ಮನ್ನು ಎದುರಿಸುವ ಶಕ್ತಿ ನಮಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆಯಿಲ್ಲ

ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆಯೂ ಇಲ್ಲವೆಂದು ಕುಮಾರಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕಾಂಗ್ರೆಸ್‍ನಿಂದ ಗೆದ್ದಂತೆ. ಇವರಿಗೆ ರಾಜ್ಯದ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸ್ತಾರೆ. ಸಿದ್ದರಾಮಯ್ಯ ಏನು ಟ್ವೀಟ್ ‌ಮಾಡಿದ್ದಾರೆ? ಸಂಜೆ ವೇಳೆಗೆ ಅವರ ಹಣೆಬರೆಹ ಗೊತ್ತಾಗುತ್ತದೆ. ಇಷ್ಟೊಂದು ಕೀಳುಮಟ್ಟದ ರಾಜಕಾರಣ ಮಾಡಬೇಕಾ? ಅಂತಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Rajya Sabha Elections 2022: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ  

ಮಂತ್ರಿ ಮಾಡಿದ್ದೇ ದೊಡ್ಡದು. ಜೆಡಿಎಸ್‍ಗೆ ಮತ ಕೊಟ್ಟಿದ್ದೇನೆ ಅಂತಾರೆ, ಆದರೆ ಮಾಡ್ತಿರೋದೇನು? ಎಂದು ಜೆಡಿಎಸ್ ರೆಬೆಲ್ ಶಾಸಕರ ಬಗ್ಗೆ ಎಚ್‍ಡಿಕೆ ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News