ದಲಿತ ಪ್ರೇಮ ಇದ್ದರೆ ದಲಿತರನ್ನೇ ಸಿಎಂ ಮಾಡಲಿ: ಕಾಂಗ್ರೆಸ್‍ಗೆ ಎಚ್‍.ಡಿ.ಕುಮಾರಸ್ವಾಮಿ ಸವಾಲು

HD Kumaraswamy on Dalit CM: ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ, ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Written by - Prashobh Devanahalli | Last Updated : Jul 20, 2023, 08:11 PM IST
  • ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದಲೂ ಇದೆ
  • ಹಿಂದೆ ಮರ್ಲಿಕಾರ್ಜುನ್ ಖರ್ಗೆಯವರಿಗೆ ಸಿಎಂ ಹುದ್ದೆ ‘ಕೈ’ ತಪ್ಪುವಂತೆ ಮಾಡಲಾಗಿತ್ತು
  • ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ, ದಲಿತರನ್ನೇ ಸಿಎಂ ಮಾಡಲಿ
ದಲಿತ ಪ್ರೇಮ ಇದ್ದರೆ ದಲಿತರನ್ನೇ ಸಿಎಂ ಮಾಡಲಿ: ಕಾಂಗ್ರೆಸ್‍ಗೆ ಎಚ್‍.ಡಿ.ಕುಮಾರಸ್ವಾಮಿ ಸವಾಲು title=
'ದಲಿತರನ್ನೇ ಸಿಎಂ ಮಾಡಲಿ'

 ಬೆಂಗಳೂರು: ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ ಬಿಟ್ಟ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ‘ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತರನ್ನೇ ಮುಖ್ಯಮಂತ್ರಿಯನ್ನು ಮಾಡಲಿ’ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು; ಇಬ್ಬರು ಸಚಿವರು ಉಪ ಸಭಾಧ್ಯಕ್ಷರ ಬಗ್ಗೆ ಕಾಳಜಿ ತೋರಿಸಿದ್ದಾರೆ. ಆದರೆ ಅವರನ್ನು ಇನ್ನೊಬ್ಬ ಶಾಸಕರು ಬೇಡವೆಂದು ಉಪ ಸಭಾಧ್ಯಕ್ಷರ ಹುದ್ದೆಯಲ್ಲಿ ಕೂರಿಸಿದ್ದಾರೆ. ಅವರಿಗಾಗಿ ಇವರು ಸಚಿವ ಸ್ಥಾನವನ್ನು ತ್ಯಾಗ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ!! ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಜೀವಂತ ಸಾಕ್ಷಿ!! 2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೇ ಎಂದು ಕೆಲವರು ಪ್ರಶ್ನಿಸಿದ್ದಾರೆ ಎಂದು ಎಚ್‍ಡಿಕೆ ಲೇವಡಿ ಮಾಡಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ? 2/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 20, 2023

 

ಇದನ್ನೂ ಓದಿ: ಮಣಿಪುರ ಘಟನೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ

ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನದ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ? ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ? 4/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 20, 2023

ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ? ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲವೆಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ? ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.

ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರ್ಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡವೆಂದು ಹುದ್ದೆಯನ್ನು ರುದ್ರಪ್ಪ ಲಮಾಣಿಯವರ ತಲೆಗೆ ಕಟ್ಟಿದ್ದು ಯಾಕೆ? ಎಂದು ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುಣಿಗಲ್ ತಾಲೂಕಿನ ಹೇರೂರು ಗ್ರಾಮ ಪಂಚಾಯ್ತಿಯಲ್ಲಿ ಹೈಡ್ರಾಮಾ

ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್'ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ. 6/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 20, 2023

ಇಂತಹ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿಯವರು ದಲಿತರೆನ್ನುವುದು ಕಾಂಗ್ರೆಸ್‍ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಬೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿಯವರಿಗೆ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲ, ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಮರ್ಲಿಕಾರ್ಜುನ್ ಖರ್ಗೆಯವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ, ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

  

Trending News