ವಿಎಚ್ಪಿ ಅಲ್ಲ ‘ವಿಶ್ವ ವಿನಾಶಕ ಪರಿಷತ್`: ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ ಸೃಷ್ಟಿ- ಎಚ್ಡಿಕೆ
ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ, ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ, ಮನಸ್ಸುಗಳನ್ನು ಒಡೆದು ದೇಶವನ್ನು ‘ಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು’ ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ವಿಶ್ವ ಹಿಂದೂ ಪರಿಷತ್, ‘ವಿಶ್ವ ವಿನಾಶಕ ಪರಿಷತ್ʼ ಅಥವಾ ‘ಧರ್ಮ ವಿನಾಶಕ ಪರಿಷತ್ʼ ಆಗುವುದು ಬೇಡ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ಹಲಾಲ್ ಕಟ್ V/S ಜಟ್ಕಾ ಕಟ್ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್(Vishva Hindu Parishad), ಬಜರಂಗದಳ(Bajrang Dal)ದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ’ವೆಂದು ಅವರು ಹೇಳಿದ್ದಾರೆ.
ನಾನು ಹಿಂದೂ ಅಲ್ಲ- ಯಾರಾದ್ರು ಕೇಸ್ ಹಾಕಿದ್ರೆ ನನ್ನ ಪರವಾಗಿ ನ್ಯಾಯಮೂರ್ತಿ ಇದ್ದಾರೆ- ಕುಂ.ವೀರಭದ್ರಪ್ಪ
‘ವಿಶ್ವ ಹಿಂದೂ ಪರಿಷತ್, ‘ವಿಶ್ವ ವಿನಾಶಕ ಪರಿಷತ್ʼ ಅಥವಾ ‘ಧರ್ಮ ವಿನಾಶಕ ಪರಿಷತ್ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ? ಕೊರೋನಾ(CoronaVirus) ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ-ಧರ್ಮ ಮೀರಿ ಸೇವೆ ಮಾಡಿದ್ದಾರೆ. ‘ಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ?’ವೆಂದು ಪ್ರಶ್ನಿಸಿದ್ದಾರೆ.
Karnataka Hijab Row) ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಡಿಕೆಶಿ-ಸಿದ್ದರಾಮಯ್ಯ ಒಗ್ಗಟಾಗಿ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲೇ ಬೇಕು: ರಾಹುಲ್ ಗಾಂಧಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.