ಹಾಸನ ಕ್ಷೇತ್ರದ ಟಿಕೆಟ್ ಕುರಿತು ದೇವೇಗೌಡರೇ ನಿರ್ಧಾರ ತೆಗೆದುಕೊಳ್ಳುತ್ತಾರೆ
ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಎಲ್ಲ ನಿರ್ಧಾರವನ್ನೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತೆಗೆದುಕೊಳ್ಳುತ್ತಾರೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಿಂದೆ ಸರಿದಿದ್ದಾರೆ.
ಹಾಸನ : ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಎಲ್ಲ ನಿರ್ಧಾರವನ್ನೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತೆಗೆದುಕೊಳ್ಳುತ್ತಾರೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹಿಂದೆ ಸರಿದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಕ್ಷೇತ್ರದ ಯಾವುದೇ ಕಾರ್ಯಕರ್ತರ ಸಭೆ ನಡೆಸುತ್ತಿಲ್ಲ. ಸಮಾನ ಮನಸ್ಕರನ್ನು ಕಚೇರಿಗೆ ಬರಲು ಹೇಳಿದ್ದೆ. ಮುಕ್ತವಾಗಿ ಚರ್ಚೆ ಮಾಡಿ, ಗೊಂದಲಕ್ಕೆ ಅವಕಾಶವಿಲ್ಲದೆ, ಪಕ್ಷಕ್ಕೂ ತೊಂದರೆ ಆಗದಂತೆ ನಿರ್ಧಾರ ಕೈಗೊಳ್ಳುವ ಆಲೋಚನೆ ಮಾಡಿದ್ದೆ. ಆದರೆ ನೆನ್ನೆ ರಾತ್ರಿ ಕೊನೆಯಲ್ಲಿ ಸಭೆ ರದ್ದಾಗಿದೆ ಎಂಬ ಮಾಹಿತಿ ಬಂದಿದೆ ಎಂದು. ಹಾಸನ ಕ್ಷೇತ್ರದ ಟಿಕೆಟ್ ವಿಚಾರವಾಗಿ ದೇವೇಗೌಡರೊಂದಿಗೆ ನಾನು ಯಾವುದೇ ಚರ್ಚೆ ಮಾಡಿಲ್ಲ. ದೇವೇಗೌಡರು ಅನಾರೋಗ್ಯದಲ್ಲಿದ್ದು ಅವರ ಆರೋಗ್ಯವನ್ನು ಇನ್ನಷ್ಟು ಹಾಳು ಮಾಡಲು ನಾನು ಬಯಸುವುದಿಲ್ಲ ಎಂದರು.
ಇದನ್ನೂ ಓದಿ: 3673 ಪೌರಕಾರ್ಮಿಕರ ನೇರ ನೇಮಕಾತಿ ಅವ್ಯವಹಾರ ಆರೋಪ: ಬಿಬಿಎಂಪಿ ಸ್ಪಷ್ಟೀಕರಣ
ಇನ್ನು ಇದೇ ವೇಳೆ ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಗುಡುಗಿ ಹೆಚ್‌ಡಿಕೆ, ಸುಧಾಕರ್ ಅವರು ಏನು ಎಂಬುದು ಜನರಿಗೆ ತಿಳಿದಿದೆ. ವೈದ್ಯಕೀಯವಿಜ್ಞಾನ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹಣ ಕೊಡಬೇಕಾದ ಸ್ಥಿತಿ ಇದೆ. ವಿಧಾನ ಪರಿಷತ್ತಿನಲ್ಲಿ ಪ್ರಮುಖ ಸ್ಥಾನದಲ್ಲಿ ಇರುವವರೊಬ್ಬರ ತಮ್ಮ ಪುತ್ರಿಗೆ 50 ಲಕ್ಷ ಹಣ ಕೇಳಲಾಗಿದೆ ಎಂದು ಆರೋಪಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.