ಬೆಂಗಳೂರು: ದೆಹಲಿಯಲ್ಲಿ ರೈತರ ಆಂದೋಲನದ ನೇತೃತ್ವ ವಹಿಸಿಕೊಂಡಿರುವ ರಾಕೇಶ್ ಟಿಕಾಯತ್ ಮಾರ್ಚ್ 20ರ ಶನಿವಾರ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಭಾಷಣ ಮಾಡಿದ್ದರು. ಕೋಟೆ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.


COMMERCIAL BREAK
SCROLL TO CONTINUE READING

ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರಕರಣ ದಾಖಲು(Police Case) ಮಾಡಿರುವುದನ್ನು ಖಂಡಿಸಿದ್ದಾರೆ. ಸರ್ಕಾರ ರಾಕೇಶ್ ಟಿಕಾಯತ್ ವಿರುದ್ಧ ದಾಖಲು ಮಾಡಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.


ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವ ಎಲ್ಲರಿಗೂ ಕಡ್ಡಾಯ ಕರೋನ ಪರೀಕ್ಷೆ


ಇಂದು ಈ ಕುರಿತು ಉಭಯ ನಾಯಕರು ಟ್ವೀಟ್ ಮಾಡಿದ್ದಾರೆ. "ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ," ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧ ಕೇಸು ರದ್ದಾಗಬೇಕು" ಎಂದು ಕುಮಾರಸ್ವಾಮಿ(HD Kumaraswamy) ಟ್ವೀಟ್ ಮಾಡಿದ್ದಾರೆ.


CD Case: ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ರಿಲೀಸ್: ಸಿದ್ದರಾಮಯ್ಯ, ಡಿಕೆಶಿ ಹೆಸರು ಪ್ರಸ್ತಾಪ!


ತಮ್ಮ  ಎರಡನೇ ಟ್ವೀಟ್‌ನಲ್ಲಿ ಹೆಚ್. ಡಿ. ಕುಮಾರಸ್ವಾಮಿ "ರೈತ ನಾಯಕ ರಾಕೇಶ್ ಟಿಕಾಯತ್(Rakesh Tikait) ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು?" ಎಂದು ಕರ್ನಾಟಕದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.


COVID -19 ನಿಯಮಗಳನ್ನು ಮೀರಿದರೆ ಬೀಳಲಿದೆ ಭಾರೀ ದಂಡ ..!


ಡಿ. ಕೆ. ಶಿವಕುಮಾರ್(DK Shivakumar), "ರೈತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿ, ಎಂದು ಕರೆನೀಡಿದ ರಾಕೇಶ್ ಟಿಕಾಯತ್ ವಿರುದ್ಧ ಪ್ರಚೋದನಾಕಾರಿ ಭಾಷಣದ ಪ್ರಕರಣ ದಾಖಲಿಸಿರುವುದು ಖಂಡನೀಯ" ಎಂದು ಟ್ವೀಟ್ ಮಾಡಿದ್ದಾರೆ.


"ಸಚಿವ ಡಾ.ಸುಧಾಕರ್ ಉದ್ದಟತನದ ಹೇಳಿಕೆಯಿಂದ 225 ಶಾಸಕರ ಮಾನಹಾನಿ"


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.