ಕರ್ನಾಟಕದಲ್ಲಿ ಕನ್ನಡ ಧ್ವಜ ಹಾರಿಸುವವರ ಮೇಲೆ ದಾಳಿ ನಡೆಯುತ್ತದೆ ಎಂದರೆ ಹೆಂಗೆ? ಕುಮಾರಸ್ವಾಮಿ ಪ್ರಶ್ನೆ

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜವನ್ನು ಡಿಸೆಂಬರ್ 31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. - ಕುಮಾರಸ್ವಾಮಿ  

Written by - Yashaswini V | Last Updated : Jan 2, 2021, 01:35 PM IST
  • ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಚ್.ಡಿ. ಕುಮಾರಸ್ವಾಮಿ
  • 'ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸ ಪಡುವುದು ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ'
  • ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸದಿದ್ದರೆ ಕೈಲಾಗದವರಿಂದಲೂ ಕನ್ನಡಿಗರ ಮೇಲೆ ಸವಾರಿ...
ಕರ್ನಾಟಕದಲ್ಲಿ ಕನ್ನಡ ಧ್ವಜ ಹಾರಿಸುವವರ ಮೇಲೆ ದಾಳಿ ನಡೆಯುತ್ತದೆ ಎಂದರೆ ಹೆಂಗೆ? ಕುಮಾರಸ್ವಾಮಿ ಪ್ರಶ್ನೆ title=
File Image

ಬೆಂಗಳೂರು: ಬೆಳಗಾವಿ ಪಾಲಿಕೆ ಎದುರು ಇತ್ತೀಚೆಗೆ ನಾಡ ಧ್ವಜ ಹಾರಿಸಿದ ಕನ್ನಡಪರ ಹೋರಾಟಗಾರರ ದಾಳಿ ನಡೆಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಖಂಡಿಸಿದ್ದಾರೆ. ಕನ್ನಡ ಪರ ಹೋರಾಟಗಾರರಿಗೆ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. 

ಈ ಬಗ್ಗೆ ಸರಣಿ ಟ್ವೀಟ್ (Tweet) ಮಾಡಿರುವ ಕುಮಾರಸ್ವಾಮಿ, ಬೆಳಗಾವಿ ಪಾಲಿಕೆ ಎದುರು ಡಿ. 28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ' ಎಂದಿದ್ದಾರೆ.

'ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದು ಹೋಗಿದೆ. ಕರ್ನಾಟಕದಲ್ಲಿ (Karnataka), ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡ ಪ್ರೇಮ ಪ್ರಶ್ನಾರ್ಹ' ಎಂದು ಹೇಳಿದ್ದಾರೆ.

ಇದನ್ನೂ ಓದಿ : Gram Panchayat Election: ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಸಾಧನೆ ಗಮನಾರ್ಹ- ಕುಮಾರಸ್ವಾಮಿ

'ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜವನ್ನು ಡಿಸೆಂಬರ್ 31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ (Maharashtra) ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು' ಎಂದಿದ್ದಾರೆ. 

'ಬೆಳಗಾವಿ (Belagavi) ಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ 'ಕನ್ನಡಿಗನೇ ಸಾರ್ವಭೌಮ' ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು...' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿ ಜತೆ ಜೆಡಿಎಸ್ ವಿಲೀನ ಸಾಧ್ಯವೇ ಇಲ್ಲ : ಕುಮಾರಸ್ವಾಮಿ ಸ್ಪಷ್ಟನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News