HD Revanna: '2023ರಲ್ಲಿ ಹೆಚ್‌ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ'

ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ.

Last Updated : Mar 16, 2021, 03:22 PM IST
  • ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಹೆಚ್‌.ಡಿ.ಕುಮಾರಸ್ವಾಮಿ ನೇತೃತದ ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ.
  • ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ.
  • ಭಗವಂತ ಡಿಕೆ ಶಿವಕುಮಾರ್‌ ಅವರಿಗೆ ಒಳ್ಳೆಯದು ಮಾಡಲಿ. ಒಂಭತ್ತು ಗ್ರಹಗಳು ಸುತ್ತುತ್ತವೆ. ಗ್ರಹಗಳು ಪಥ ಬದಲಿಸುತ್ತಿವೆ.
HD Revanna: '2023ರಲ್ಲಿ ಹೆಚ್‌ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ' title=

ಬೆಂಗಳೂರು: ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಹೆಚ್‌.ಡಿ.ಕುಮಾರಸ್ವಾಮಿ ನೇತೃತದ ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಹೆಚ್‌.ಡಿ.ರೇವಣ್ಣ(HD Revanna), ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆಯೋ, ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ. ಕುಮಾರಸ್ವಾಮಿ ಹತ್ತಿರ ಕೆಲವು ಗ್ರಹಗಳು ಇದ್ದವು. ಅವು ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹತ್ತಿರ ಸೇರಿವೆ. ಕುಮಾರಸ್ವಾಮಿ ಕೆಲ ದಿನಗಳ ಕಾಲ ನೋವು ಅನುಭವಿಸಿದರು. ಆ ಗ್ರಹದ ಪರಿಣಾಮ ಶಿವಕುಮಾರ್‌ ಅನುಭವಿಸುವುದು ಬೇಡ ಎಂಬುದು ನಮ್ಮ ಕಳಕಳಿ ಎಂದರು.

Karnataka BJP: CD ಪ್ರಕರಣದ ಬಗ್ಗೆ ಬಿಜೆಪಿಯಿಂದ 'ಪ್ರಪ್ರಥಮ' ಭಾರಿಗೆ ಅಧಿಕೃತ ಹೇಳಿಕೆ!

ಇನ್ನೂ ಕೆಲವು ಗ್ರಹಗಳಿದ್ದು, ಅವು ಹೋದರೆ ಎಲ್ಲವೂ ಸ್ವಚ್ಛ ಆಗುತ್ತದೆ. ಕಾಂಗ್ರೆಸ್‌ನಲ್ಲಿ ಗ್ರಹಗಳು ಕಡಿಮೆ ಇವೆ. ಈ ಗ್ರಹಗಳೆಲ್ಲಾ ಹೋದರೆ ಪಕ್ಷದವರಿಗೆ ಒಳ್ಳೆಯದಂತೂ ಆಗಲ್ಲ. ಭಗವಂತ ಡಿಕೆ ಶಿವಕುಮಾರ್(DK Shivakumar)‌ ಅವರಿಗೆ ಒಳ್ಳೆಯದು ಮಾಡಲಿ. ಒಂಭತ್ತು ಗ್ರಹಗಳು ಸುತ್ತುತ್ತವೆ. ಗ್ರಹಗಳು ಪಥ ಬದಲಿಸುತ್ತಿವೆ. ಕೆಪಿಸಿಸಿ ಅಧ್ಯಕ್ಷರು ಅದನ್ನು ಬರಮಾಡಿಕೊಳ್ಳುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.

KSRTC BUS: ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಮತ್ತೆ ಆರಂಭ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News