Five State Election Results: ಪಂಚರಾಜ್ಯಗಳ ಫಲಿತಾಂಶದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಜ್ಜಾನೋದಯ ಮಾಡಿಕೊಳ್ಳುವ ಫಲಿತಾಂಶ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

Written by - Zee Kannada News Desk | Last Updated : Mar 10, 2022, 12:34 PM IST
  • ಗೋವಾ, ಪಂಜಾಬ್ ನಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದರು
  • ಕರ್ನಾಟಕದಿಂದ ಸೂತ್ರಧಾರರನ್ನು ಗೋವಾಗೆ ಕಳುಹಿಸಿದ್ದರು
  • ಜೆಡಿಎಸ್ ಮುಗಿಸಲು ಹೋದವರಿಗೆ ಪಾಠ ಕಲಿಸಿದ ಚುನಾವಣಾ ಫಲಿತಾಂಶ ಇದಾಗಿದೆ- ಹೆಚ್.ಡಿ. ಕುಮಾರಸ್ವಾಮಿ
Five State Election Results: ಪಂಚರಾಜ್ಯಗಳ ಫಲಿತಾಂಶದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ title=
HD Kumaraswamy's reaction on five state election results

ಬೆಂಗಳೂರು: ರಾಜ್ಯದಲ್ಲಿ ಇನ್ನೇನು ಅಧಿಕಾರಕ್ಕೆ ಬಂದೇಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಪಂಚರಾಜ್ಯಗಳ ಫಲಿತಾಂಶ ಶಾಕ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್ ಪಕ್ಷಕ್ಕೆ ಪರೋಕ್ಷ ಟಾಂಗ್ ನೀಡಿದರು.

ಐದು ರಾಜ್ಯಗಳ ಫಲಿತಾಂಶ (Five State Election Results) ಸಂಬಂಧ ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಮೀಕ್ಷೆಗಳು ಭವಿಷ್ಯ ನುಡಿದಂತೆ ಚುನಾವಣೆ ಫಲಿತಾಂಶ ಬರುತ್ತಿದೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಜ್ಜಾನೋದಯ ಮಾಡಿಕೊಳ್ಳುವ ಫಲಿತಾಂಶ ಇದಾಗಿದೆ ಎಂದು ಹೇಳಿದರು.

ಇದನ್ನೂ ಓದಿ- 5 State Election Results 2022 Live: ‘ಪಂಚ’ ರಾಜ್ಯ ಚುನಾವಣಾ ಫಲಿತಾಂಶದ ಕ್ಷಣಕ್ಷಣದ ಮಾಹಿತಿ

ಗೋವಾ, ಪಂಜಾಬ್ ನಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದರು. ಕರ್ನಾಟಕದಿಂದ ಸೂತ್ರಧಾರರನ್ನು ಗೋವಾಗೆ ಕಳುಹಿಸಿದ್ದರು ಎಂದ ಅವರು; ಜೆಡಿಎಸ್ ಮುಗಿಸಲು ಹೋದವರಿಗೆ ಪಾಠ ಕಲಿಸಿದ ಚುನಾವಣಾ ಫಲಿತಾಂಶ (Election Results) ಇದಾಗಿದೆ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ಪೈಪೋಟಿ ನೀಡಲು ಜೆಡಿಎಸ್ ಸೂಕ್ತ ಎಂಬುದು ಸಾಬೀತಾಗಿದೆ ಎಂದು ತಿಳಿಸಿದರು.

ನೀರಾವರಿ ವಿಚಾರಗಳನ್ನು ಮುಂದಿಟ್ಟುಕೊಂಡು ನಾವು  ಹೋರಾಟ ಮಾಡುತ್ತೇವೆ ಎಂದ ಅವರು, ಐದು ರಾಜ್ಯಗಳ ಪರಿಸ್ಥಿತಿ ಬೇರೆ, ನಮ್ಮ ರಾಜ್ಯಗಳ ಪರಿಸ್ಥಿತಿ ಬೇರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದನ್ನೂ ಓದಿ- Punjab Assembly Elections 2022 Results: ಆಮ್ ಆದ್ಮಿ ಪಕ್ಷ ಕ್ಲೀನ್ ಸ್ವೀಪ್ ಮಾಡಿದ್ರೆ, ಸವಾಲುಗಳು ಏನಿರಲಿವೆ?

ಹಿಂದೆ ಪಶ್ಚಿಮ ಬಂಗಾಳದಲ್ಲಿ ಬಂದ ಫಲಿತಾಂಶ ಹಾಗೂ ಪಂಜಾಬ್ ನಲ್ಲಿ ಆಗಿರುವ ಬದಲಾವಣೆ ನಮಗೆ ಪ್ರೇರಣೆ ತಂದಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News