ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಎಚ್‌ಡಿ‌ಕೆ ಕುಟುಂಬಕ್ಕೆ ಆಹ್ವಾನ

ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.

Written by - Yashaswini V | Last Updated : Dec 26, 2023, 10:47 AM IST
  • ಜನವರಿ 22ಕ್ಕೆ ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ
  • ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ
  • ಸಂತೋಷದಿಂದ ಪಾಲ್ಗೊಳ್ಳುವೆ ಎಂದು ತಿಳಿಸಿದ ಮಾಜಿ ಮುಖ್ಯಮಂತ್ರಿಗಳು
ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಎಚ್‌ಡಿ‌ಕೆ ಕುಟುಂಬಕ್ಕೆ ಆಹ್ವಾನ  title=

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನಿಸಿದೆ.

ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.

ಇದನ್ನೂ ಓದಿ- ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಸಿದ್ದರಾಮಯ್ಯ ಚಾಲನೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ ಆಗಿರುವ ರಾಮ ಲಾಲ್ ಮತ್ತಿತರರು ಟ್ರಸ್ಟ್ ಪರವಾಗಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ಅವರ ಪುತ್ರ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದರು.

ಆಹ್ವಾನ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿಗಳು, ಕುಟುಂಬ ಸಮೇತ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ರಾಮ್ ಲಾಲ್ ಅವರಿಗೆ ತಿಳಿಸಿದರು. ಅಲ್ಲದೆ, ರಾಮಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ- ಅನ್ನ ಕೊಡುವ ನೆಲದ ನಿಯಮ ಪಾಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಈಗಾಗಲೇ ಟ್ರಸ್ಟ್ ನ ಪ್ರಮುಖರು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News