ಬಡವರಿಗೆ ಆಹಾರದ ಕಿಟ್ ನೀಡುವ ಕಾರ್ಯಕ್ಕೆ ಹೆಚ್ಡಿಕೆ ಕುಟುಂಬದಿಂದ ಚಾಲನೆ
ಈಗಾಗಲೇ ತೀರಾ ಬಡತನದಲ್ಲಿರುವ, ಊಟದ ಸಮಸ್ಯೆ ಇರೋ ಜನರಿಗೂ ಕೂಡ ಬೆಳಿಗ್ಗೆ ಸಂಜೆ ಎರಡೂ ಸಮಯ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ 10 ಸಾವಿರ ಜನರಿಗೆ ಉಚಿತ ಉಪಹಾರ ವ್ಯವಸ್ಥೆಯನ್ನ ಮಾಡಲಾಗುತ್ತಿದೆ.
ಬೆಂಗಳೂರು: ತಿಂಗಳಿಂದ ಜಾರಿಯಲ್ಲಿರುವ ಲಾಕ್ಡೌನ್ ನಿಂದಾಗಿ ಕಷ್ಟಕ್ಕೆ ಸಿಲುಕಿರುವ ಜನರಿಗೆ ಆಹಾರದ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) , ರಾಮನಗರ ಶಾಸಕರಾದ ಅನಿತಾ ಕುಮಾರಸ್ವಾಮಿ (Anitha Kumaraswamy), ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ನಿಖಿಲ್ ಅವರು ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಸುಮಾರು ಒಂದು ಲಕ್ಷ ಕುಟುಂಬಕ್ಕೆ ದಿನಸಿ ವಸ್ತುಗಳ ಕಿಟ್ ವಿತರಣೆಗೆ ರಾಮನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.
ಈಗಾಗಲೇ ತೀರಾ ಬಡತನದಲ್ಲಿರುವ, ಊಟದ ಸಮಸ್ಯೆ ಇರೋ ಜನರಿಗೂ ಕೂಡ ಬೆಳಿಗ್ಗೆ ಸಂಜೆ ಎರಡೂ ಸಮಯ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ 10 ಸಾವಿರ ಜನರಿಗೆ ಉಚಿತ ಉಪಹಾರ ವ್ಯವಸ್ಥೆಯನ್ನ ಮಾಡಲಾಗುತ್ತಿದೆ.
ಕರೋನಾವೈರಸ್ (Coronavirus) ಸಂಕಷ್ಟದಲ್ಲಿರುವ ಸಂಧರ್ಭದಲ್ಲಿ ಬಡಜನರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.
ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳ ನಗರಸಭಾ ವ್ಯಾಪ್ತಿಯ ಪ್ರತಿ ವಾರ್ಡ್ ಗಳಲ್ಲಿ ಬಡವರಿಗೆ ಮತ್ತು ಪ್ರತಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಹಳ್ಳಿಗಳಲ್ಲಿ ದಿನಸಿ ಕಿಟ್ ಗಳನ್ನ ಸಾಂಕೇತಿಕವಾಗಿ ನೀಡುವ ಮೂಲಕ ಚಾಲನೆ ನೀಡಿದರು.
ಕೊರೋನಾ ಇಡೀ ವಿಶ್ವಕ್ಕೆ ಮಹಾಮಾರಿಯಾಗಿದೆ. ಈ ಸಂಧರ್ಭದಲ್ಲಿ ನಮ್ಮ ಕ್ಷೇತ್ರದ ಜನ ಯಾವುದೇ ಸಮಸ್ಯೆಯಾಗದಂತೆ ಹೆಚ್.ಡಿ. ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಸೂಕ್ತ ವ್ಯವಸ್ಥೆಗಳನ್ನು ಮಾಡ್ತಿದ್ದಾರೆ. ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ, ರೇವತಿ ನಿಖಿಲ್ ವಿವಾಹವಾದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಸಮಾಜಮುಖಿ ಕಾರ್ಯದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.