ಬೆಂಗಳೂರು: ಬಿಬಿಎಂಪಿ(BBMP) ಖಾರ್ಯವೈಖರಿ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೊರೊನಾ 1, 2 ಮತ್ತು 3ನೇ ಅಲೆಯ ವೇಳೆ ಸೋಂಕಿತರ ಚಿಕಿತ್ಸೆ ನೀಡಲು ಆಯುಷ್ ಮತ್ತು ದಂತ ವೈದ್ಯರನ್ನು ನೇಮಕ ಮಾಡಿಕೊಂಡಿದ್ದ ಬಿಬಿಎಂಪಿ ಇದೀಗ ನಮಗೆ ನಿಮ್ಮ ಅಗತ್ಯವಿಲ್ಲವೆಂದು ಹೇಳಿದೆ. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ(HD Kumaraswamy) ಸರಣಿ ಟ್ವೀಟ್ ಮಾಡಿದ್ದು, ಬಿಬಿಎಂಪಿ ಅಧಿಕಾರಿಗಳನ್ನು(BBMP Officers) ತರಾಟೆಗೆ ತೆಗೆದುಕೊಂಡಿದ್ದಾರೆ.
ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ?
ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. 1/3 pic.twitter.com/WiefhbpO9e— H D Kumaraswamy (@hd_kumaraswamy) March 22, 2022
‘ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್(COVID-19) 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ(BBMP) ನೇಮಕ ಮಾಡಿಕೊಂಡಿತ್ತು’ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: KIADB ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡವೆಂದವರಿಗೆ ಸೈಟ್: ಸಚಿವ ನಿರಾಣಿ
‘2 ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ(BBMP) ವತಿಯಿಂದ ಬೆಂಗಳೂರಿನ ಎಲ್ಲಾ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು’ ಅಂತಾ ಒತ್ತಾಯಿಸಿದ್ದಾರೆ.
ಉತ್ಸಾಹಿ ತರುಣರಾದ ಇವರೆಲ್ಲರೂ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದರಲ್ಲಿ ಸಂಶಯವಿಲ್ಲ. ಎರಡು ವರ್ಷಗಳ ತುರ್ತು ಸಂದರ್ಭದಲ್ಲಿ ಕೆಲಸ ಮಾಡಿದ ಅನುಭವ ಕೂಡ ಇವರಿಗಿದೆ. @CMofKarnataka ಅವರು ಇವರಿಗೆ ಅನುಕೂಲ ಮಾಡಿಕೊಡಬೇಕು. 3/3
— H D Kumaraswamy (@hd_kumaraswamy) March 22, 2022
‘ಉತ್ಸಾಹಿ ತರುಣರಾದ ಇವರೆಲ್ಲರೂ ಜನರಿಗೆ ಉತ್ತಮ ಆರೋಗ್ಯ ಸೇವೆ(Health Service)ನೀಡುವುದರಲ್ಲಿ ಸಂಶಯವಿಲ್ಲ. 2 ವರ್ಷಗಳ ತುರ್ತು ಸಂದರ್ಭದಲ್ಲಿ ಕೆಲಸ ಮಾಡಿದ ಅನುಭವ ಕೂಡ ಇವರಿಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಇವರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಎಚ್ ಡಿಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Siddharamaiah Allegations On BJP: ಜೇಮ್ಸ್ ಚಿತ್ರ ನಿಲ್ಲಿಸಲು ಬಿಜೆಪಿ ಒತ್ತಡ, ಸಿದ್ದರಾಮಯ್ಯ ಆರೋಪ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.