ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ 60% ಕಮೀಶನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಇದು ತರಕಾರಿಯಲ್ಲ, ಸಂಜೀವಿನಿ!ಮಧುಮೇಹದಿಂದ ಕ್ಯಾನ್ಸರ್ ವರೆಗೆ ಮುಕ್ತಿ ನೀಡಬಲ್ಲ ಪರಮೌಷಧ! ವರ್ಷದಲ್ಲಿ ಮೂರೇ ತಿಂಗಳು ಸಿಗುವ ಕಾಯಿ ಇದು !


ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವರು; 60% ಕಮಿಷನ್, ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.


ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮಿಷನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ ಎಂದು ಸಚಿವರು ಟಾಂಗ್ ನೀಡಿದ್ದಾರೆ.


ಕಮಿಷನ್ ವ್ಯವಹಾರ ಇಲ್ಲ ಎಂದಾದರೆ, 'ಯಾಕಪ್ಪಾ ಹಾಗೆ ಹೇಳಿದಿರಿ?' ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಖಾರವಾಗಿ ಕೇಳಿದ್ದಾರೆ.


ಇದನ್ನೂ ಓದಿ: ಡೈ ಮಾಡುವುದು ಬೇಕಿಲ್ಲ..! ಕೇವಲ ಎರಡು ವಾರ ಈ ಎಣ್ಣೆ ಬಳಸಿದರೆ ಬೆಳ್ಳಗಾಗಿರುವ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತೆ...!


ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮಿಷನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ ಎಂದು ಒತ್ತಾಯಿಸಿರುವ ಕೇಂದ್ರ ಸಚಿವರು; 60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!! ಎಂದು ತಮ್ಮನ್ನು ಹಿಟ್ ಅಂಡ್ ರನ್ ಎನ್ನುತ್ತಿದ್ದ ಸಿಎಂಗೆ ಚಾಟಿ ಬೀಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.