ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಇಂದು ಮಂಡ್ಯ ಮತ್ತು ತುಮಕೂರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಲ್ಲಿ ಚರ್ಚಿಸಿ ಜಿಲ್ಲೆಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ವೈರಸ್ ಮತ್ತು ಲಾಕ್‌ಡೌನ್ (Lockdown) ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು.
ವಿಡಿಯೊ ಕಾನ್ಫರೆನ್ಸ್ ನಲ್ಲಿ ಮಂಡ್ಯ ಶಾಸಕ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು, ನಾಗಮಂಗಲ ಶಾಸಕ ಸುರೇಶ್ ಗೌಡ, ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ, ಶಿರಾ ಶಾಸಕ ಸತ್ಯನಾರಾಯಣ ಪಾಲ್ಗೊಂಡಿದ್ದರು.
ಕೊರೊನಾ ವೈರಸ್ ತಡೆಗೆ ಎರಡೂ ಜಿಲ್ಲೆಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕುಮಾರಸ್ವಾಮಿ ಚರ್ಚಿಸಿದರು.
ಲಾಕ್‌ಡೌನ್‌ನಿಂದ ರೈತರಿಗೆ ಆಗುತ್ತಿರುವ ಕಷ್ಟಗಳ ಬಗ್ಗೆ ಕಡೆಗೂ ಕಣ್ಣುಬಿಟ್ಟ ರಾಜ್ಯ ಸರ್ಕಾರ
ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿರುವವರಿಗೆ, ಪ್ರಮುಖವಾಗಿ ರೈತರಿಗೆ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಕ್ಷೇತ್ರದ ಮಟ್ಟದಲ್ಲಿ ನೀಡುವಂತೆ ಸೂಚಿಸಿದರು.
ರಾಮನಗರ, ಚನ್ನಪಟ್ಟಣದಲ್ಲಿ ತಾವು ಆರಂಭಿಸಿರುವ 'ಎಚ್ಡಿಕೆ ಜನತಾ ದಾಸೋಹ'ವನ್ನು ಎಲ್ಲರೂ ಆರಂಭಿಸಿ ಹಸಿದವರಿಗೆ ಆಹಾರ ಪೂರೈಸುವಂತೆ ತಿಳಿಸಿದರು. ಇದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿದರು.
ಲಾಕ್‌ಡೌನ್ ಸಮಸ್ಯೆ ಸಿಲುಕಿದವರಿಗಾಗಿ ‘ಎಚ್‌ಡಿಕೆ ಜನತಾ ದಾಸೋಹ’
ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ’ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.
ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್‌ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್‌ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.
ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.
ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.