ಮಂಗಳೂರಿಗೆ ಹೆಚ್‌ಡಿಕೆ ಭೇಟಿ: ಮೃತರ ಕುಟುಂಬಗಳಿಗೆ ಸ್ವಾಂತ್ವನ ಹೇಳಿ ಧನಸಹಾಯ ನೀಡಿದ ಮಾಜಿ ಸಿಎಂ
ಬೆಳಗ್ಗೆಯೇ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರ ಮನೆಗೆ ಧಾವಿಸಿದರು. ಈ ಸಂದರ್ಭದಲ್ಲಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು.ಅಲ್ಲದೆ, ನೊಂದ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಹಸ್ತಾಂತರ ಮಾಡಿದರು.
ಇದನ್ನೂ ಓದಿ: Monkeypox: ಕರ್ನಾಟಕದ ಗಡಿ ರಾಜ್ಯದಲ್ಲಿ ಮಂಕಿಪಾಕ್ಸ್‌ಗೆ ಓರ್ವ ಬಲಿ?
ಬೆಳಗ್ಗೆಯೇ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರ ಮನೆಗೆ ಧಾವಿಸಿದರು. ಈ ಸಂದರ್ಭದಲ್ಲಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.
ಬಳಿಕ ಪ್ರವೀಣ್ ಅವರ ಪತ್ನಿ ನೂತನ ಹಾಗೂ ಅವರ ತಂದೆ ತಾಯಿಗೆ ಮಾಜಿ ಮುಖ್ಯಮಂತ್ರಿ ಸಾಂತ್ವನ ಹೇಳಿದರು. ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮ ಕುಟುಂಬಕ್ಕೆ ನ್ಯಾಯ ಸಿಗುವ ರೀತಿಯಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಆರ್ಥಿಕವಾಗಿ ಅಥವಾ ಯಾವುದೇ ರೀತಿಯ ಸಂಕಷ್ಟ ಎದುರಾದರೂ ನನಗೆ ಕರೆ ಮಾಡಿ. ನಮ್ಮ ಪಕ್ಷವು ನಿಮ್ಮ ನೆರವಿಗೆ ಧಾವಿಸುತ್ತದೆ ಅವರು ಎಂದು ಕುಟುಂಬದವರಿಗೆ ತಮ್ಮ ಮಾಬೈಲ್ ಸಂಖ್ಯೆಯನ್ನು ಕೊಟ್ಟರು. ನಿಮ್ಮೊಂದಿಗೆ ನಾನೀದ್ದೇನೆ. ಪ್ರವೀಣ ಅವರ ಆತ್ಮಕ್ಕೆ ಶಾಂತಿ ಸಿಗಲು ನಿಮ್ಮ ಮನೆ ಮಗನಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದು ನಾನು ನಿಮ್ಮ ಕುಟುಂಬಕ್ಕೆ ನೀಡುವ ವಚನ ಎಂದು ಕುಮಾರಸ್ವಾಮಿ ಅವರು ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಪ್ರವೀಣ್ ಅವರ ಪತ್ನಿ ನೂತನ ಅವರು, "ನನ್ನ ಪತಿಯನ್ನು ಕೊಂದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು" ಎಂದು ಕುಮಾರಸ್ವಾಮಿ ಅವರ ಬಳಿ ಕಣ್ಣೀರಿಟ್ಟರು. ಆಗ ಧೈರ್ಯ ತುಂಬಿದ ಅವರು, "ತಮ್ಮ ವೈಯಕ್ತಿಕ ಮೊಬೈಲ್ ನಂಬರ್ ನೀಡಿ ಯಾವುದೇ ಸಮಸ್ಯೆ ಬಂದರೂ ತಮ್ಮನ್ನು ಸಂಪರ್ಕಿಸಬಹುದು. ತಮಗೆ ಎಲ್ಲ ರೀತಿಯ ನೆರವು ನೀಡುತ್ತೇವೆ" ಎಂದು ಭರವಸೆ ನೀಡಿದರು.
ಇನ್ನು ಇದೇ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರು ತಂದೆ, ತಾಯಿಗೂ ಧೈರ್ಯ ತುಂಬಿದ ಹೆಚ್‌ಡಿಕೆ, ಸ್ಥಳದಲ್ಲೇ ಐದು ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.
ಮಸೂದ್, ಫಾಝಿಲ್ ಮನೆಗಳಿಗೂ ಭೇಟಿ:
ಪ್ರವೀಣ್ ಅವರಿಗಿಂತ ಮೊದಲು ಬೆಳ್ಳಾರೆ ಗ್ರಾಮದಲ್ಲಿ ಹತ್ಯೆಯಾಗಿದ್ದ ಮಸೂದ್ ಅವರ ಕಳಂಜದ ನಿವಾಸಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದರು. ಮನೆಯಲ್ಲಿದ್ದ ಮಸೂದ್ ಅವರ ಚಿಕ್ಕಪ್ಪ ಹಾಗೂ ಅಣ್ಣ ತಮ್ಮನೂ ಸೇರಿ ಇಡೀ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿಗಳು, ಆ ಕುಟುಂಬಕ್ಕೂ ಸ್ಥಳದಲ್ಲೇ ಪರಿಹಾರವಾಗಿ 5 ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರ ಮಾಡಿದರು. ಮಸೂದ್ ಮುಗ್ಧನಾಗಿದ್ದು, ನಮ್ಮ ಕುಟುಂಬಕ್ಕೆ ಅನ್ಯಾಯ ಆಗಿದೆ ಎಂದು ಕುಟುಂಬಸ್ಥರು ದುಃಖ ತೋಡಿಕೊಂಡರು.
ಬಳಿಕ ಮಾಜಿ ಮುಖ್ಯಮಂತ್ರಿಗಳು ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್ ಅವರ ಮನೆಗೂ ಭೇಟಿ ನೀಡಿ ಅವರ ತಂದೆ ತಾಯಿ ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಸ್ಥಳದಲ್ಲೇ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಚೆಕ್ ಅನ್ನು ಪೋಷಕರಿಗೆ ಹಸ್ತಾಂತರ ಮಾಡಿದರು.
ಇದನ್ನೂ ಓದಿ: ಬೆಲ್ಲದ ಮೇಲಿನ GST ಖಂಡಿಸಿ ರೈತರಿಂದ ಬೃಹತ್ ಪ್ರತಿಭಟನೆ
ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.