ಬೆಂಗಳೂರು: ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಸೋಂಕು ನಿವಾರಕ ದ್ರಾವಣ ಸಿಂಪಡಣಾ ಟನಲ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ. 


COMMERCIAL BREAK
SCROLL TO CONTINUE READING

ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ನಾಲ್ಕು ಟನಲ್‌ಗಳನ್ನು ಅನುಸ್ಥಾಪಿಸಲಾಗಿದೆ. ಅವುಗಳನ್ನು ಕುಮಾರಸ್ವಾಮಿ ಅವರು ಸೋಮವಾರ ಉದ್ಘಾಟಿಸಲಿದ್ದಾರೆ. ರಾಮನಗರ ಎಪಿಎಂಸಿ ಮಾರುಕಟ್ಟೆ,  ರೇಷ್ಮೆ ಮಾರುಕಟ್ಟೆ, ಚನ್ನಪಟ್ಟಣದ ಎಪಿಎಂಸಿ ಮಾರುಕಟ್ಟೆ ಮತ್ತು ರೇಷ್ಮೆ ಮಾರುಕಟ್ಟೆಯ ಬಳಿ ಒಂದೊಂದು ಟನಲ್‌ಗಳನ್ನು ಈಗಾಗಲೇ ಅನುಸ್ಥಾಪನೆ ಮಾಡಲಾಗಿದೆ. ಅವುಗಳನ್ನು ಇಂದು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತದೆ. 


ಒಂದು ಟನಲ್‌ ಸ್ಥಾಪಿಸಲು ಒಂದು ಲಕ್ಷ ರೂಪಾಯಿ ವೆಚ್ಚ ತಗಲುತ್ತದೆ. ಸದ್ಯ ಪ್ರಾಯೋಗಿಕವಾಗಿ ಈಗ ರಾಮನಗರ ಜಿಲ್ಲೆಯಲ್ಲಿ ನಾಲ್ಕು ಟನಲ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಮುಂದೆ ಅಗತ್ಯಕ್ಕೆ ಅನುಗುಣವಾಗಿ ರಾಜ್ಯದ ಇತರ ಭಾಗಗಳಲ್ಲೂ ಟನಲ್‌ಗಳನ್ನು ಅನುಸ್ಥಾಪಿಸಲು ಕುಮಾರಸ್ವಾಮಿ ದೊಡ್ಡ ಮಟ್ಟದ ಯೋಜನೆ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. 


ಕೊರೊನಾ ವೈರಸ್‌ ತಡೆಯಲು ದೇಶದಲ್ಲಿ ಜಾರಿಗೆ ತರಲಾಗಿರುವ ಲಾಕ್‌ಡೌನ್ (Lockdown)  ನಿಂದಾಗಿ ಆಹಾರದ ಸಮಸ್ಯೆಗೆ ಸಿಲುಕಿರುವವರಿಗಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಈಗಾಗಲೇ ‘ಎಚ್‌ಡಿಕೆ ಜನತಾ ದಾಸೋಹ’ ಎಂಬ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು, ಈ ಕಾರ್ಯಕ್ರಮವನ್ನು ಕ್ಷೇತ್ರದ ಹಂತದಲ್ಲಿ ಶಾಸಕರು, ನಾಯಕರು, ಮುಖಂಡರು ಪಾಲಿಸುತ್ತಿದ್ದಾರೆ. ಹಸಿದವರಿಗೆ ಈ ಕಾರ್ಯಕ್ರಮದ ಮೂಲಕ ಆಹಾರದ ವ್ಯವಸ್ಥೆ ಮಾಡಲಾಗುತ್ತಿದೆ.