“ಹಿಂದಿ ದಿವಸ್ ಆಚರಣೆಗೆ ರಾಜ್ಯ ಸರ್ಕಾರ ಹಣ ಬಳಕೆ ಮಾಡಬಾರದು!”

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, “ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ.

Written by - Prashobh Devanahalli | Edited by - Bhavishya Shetty | Last Updated : Sep 12, 2022, 08:01 PM IST
    • "Hindi Diwas" ಆಚರಣೆಗೆ ರಾಜ್ಯ ಸರ್ಕಾರ ಪ್ರಾಯೋಜಕತ್ವ ಮಾಡಬಾರದು
    • ಇದರಿಂದ ನಾಡಿನ ಜನತೆಗೆ ಅನ್ಯಾಯ ಆಗಲಿದೆ
    • ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
“ಹಿಂದಿ ದಿವಸ್ ಆಚರಣೆಗೆ ರಾಜ್ಯ ಸರ್ಕಾರ ಹಣ ಬಳಕೆ ಮಾಡಬಾರದು!” title=
HD Kumaraswamy

ಬೆಂಗಳೂರು: ಸೆಪ್ಟೆಂಬರ್ 14ರಂದು ನಡೆಯುವ "Hindi Diwas" ಆಚರಣೆಗೆ ರಾಜ್ಯ ಸರ್ಕಾರ ಪ್ರಾಯೋಜಕತ್ವ ಮಾಡಬಾರದು, ಇದರಿಂದ ನಾಡಿನ ಜನತೆಗೆ ಅನ್ಯಾಯ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: Tejasvi Surya : ಎಂಪಿ ತೇಜಸ್ವಿ ಸೂರ್ಯ ಮನೆಗೆ ಡೆಲಿವರಿ ಆಯ್ತು ಕಾಂಗ್ರೆಸ್ ಮಸಾಲೆ ದೋಸೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, “ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ: Bangalore Flood : ರಾಜಕಾಲುವೆ ಒತ್ತುವರಿ ಮಾಡಿದ್ದ 30 ಸಂಸ್ಥೆಗಳಿಗೆ ನೋಟಿಸ್

ಸೆಪ್ಟೆಂಬರ್ 14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕು ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News