ಬೆಂಗಳೂರು: ನವೆಂಬರ್ 1 ರಿಂದ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆರೋಗ್ಯ ಭಾಗ್ಯ ಯೋಜನೆಗೆ ಸರ್ಕಾರದಿಂದ ಚಾಲನೆ ದೊರೆಯಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದೊಂದು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಕಾರ್ಯಕ್ರಮ. ಈ ಯೋಜನೆ ಅಡಿಯಲ್ಲಿ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವವರಿಗೆ ಉಚಿತ ಚಿಕಿತ್ಸೆ ಮತ್ತು ಎಪಿಎಲ್ ಪಡಿತರ ಚೀಟಿಯನ್ನು ಹೊಂದಿರುವವರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಿಎಂ ಹೇಳಿದರು.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ ನಮ್ಮ ಸರ್ಕಾರ ಬಂದ ಮೇಲೆ 12 ಹೊಸ ಮೆಡಿಕಲ್ ಕಾಲೇಜ್ ಮಾಡಿದ್ದೇವೆ. ಮತ್ತೆ ಹೊಸ 6 ಮೆಡಿಕಲ್ ಕಾಲೇಜುಗಳನ್ನು ತೆರೆಯುವ ಯೋಜನೆ ಈಗಾಗಲೇ ಜಾರಿಯಲ್ಲಿದೆ. 30 ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಇರಬೇಕು ಅನ್ನೋದು ನಮ್ಮ ಆಶಯ.
ಹಂತ ಹಂತವಾಗಿ‌ ಮೆಡಿಕಲ್ ಕಾಲೇಜು ಪ್ರಾರಂಭ ಮಾಡುತ್ತೇವೆ. ಸಾಮಾನ್ಯ ಮಗುವು ಉನ್ನತ ವ್ಯಾಸಂಗ ಮಾಡಬೇಕು ಅನ್ನೋದು ನಮ್ಮ ಉದ್ದೇಶ ಎಂದು ಆಶಯ ವ್ಯಕ್ತ ಪಡಿಸಿದರು.


ಇದರ ಜೊತೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು ಸರ್ಕಾರ ಆಲೋಚಿಸಿದೆ.
ವಿಕ್ಟೋರಿಯಾ, ಬೌರಿಂಗ್, ಕಿ ದ್ವಾಯ್, ಕೆಸಿ ಜನರಲ್, ಜೈದೇವಾದಲ್ಲಿ‌ ಇಂದಿರಾ ಕ್ಯಾಂಟಿನ್ ಅನ್ನು ಶೀಘ್ರದಲ್ಲಿ ತೆರೆಯಲಾಗುವುದು. ರೋಗಿಗಳ ಜೊತೆ ಬರುವವರಿಗೂ ಊಟ ನೀಡುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.