ಬೆಂಗಳೂರು: COVID -19 ಪಾಸಿಟಿವ್ ಬಂದು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಲಿ ಮುಖ್ಯಮಂತ್ರಿ   ಬಿ.ಎಸ್. ಯಡಿಯೂರಪ್ಪ (BS Yediyurappa) ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರ ಹೆಲ್ತ್ ಬುಲೆಟಿನ್ ಪ್ರಕಟವಾಗಿದ್ದು ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಇದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

COVID -19 ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಆಸ್ಪತ್ರೆಯಲ್ಲೇ ಮೂರು ರಾತ್ರಿ ಕಳೆದಿದ್ದಾರೆ.‌ ಯೂರಿನರಿ ಇನ್ಫೆಕ್ಷನ್ ಆಗಿ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ರಾತ್ರಿಗಳನ್ನು ಕಳೆದಿದ್ದಾರೆ. ಆಸ್ಪತ್ರೆಗೆ ದಾಖಲದ ಬಳಿಕ ಸಿದ್ದರಾಮಯ್ಯ ಅವರಿಗೆ COVID -19 ಪರೀಕ್ಷೆ ನಡೆಸಲಾಗಿದ್ದು COVID -19 ಪಾಸಿಟಿವ್ ಇರುವುದು ದೃಢಪಟ್ಟಿತ್ತು.


ಇಬ್ಬರೂ ನಾಯಕರಿಗೂ ಮಾಮೂಲಿಯಂತೆ ಬಿಪಿ ಹಾಗೂ ಶುಗರ್ ಮತ್ತಿತರ ತಪಾಸಣೆ ಮಾಡಲಾಗಿದೆ. ಈ ಪೈಕಿ ಯಡಿಯೂರಪ್ಪ ಅವರಿಗೆ ಯಾವುದೇ ರೀತಿಯ ವ್ಯತ್ಯಾಸಗಳು ಕಂಡುಬಂದಿಲ್ಲ.  ಕೋವಿಡ್ -19 (Covid 19)  ಗೆ ಸಂಬಂಧಿಸಿದಂತೆ ಯಾವುದೇ ರೋಗ ಲಕ್ಷಣಗಳು ಕೂಡ ಗೋಚರಿಸಿಲ್ಲ.‌ ಆದರೆ ಸಿದ್ದರಾಮಯ್ಯ ಅವರಿಗೆ ಮಾತ್ರ ಸ್ವಲ್ಪ ಮಟ್ಟಿಗಿನ ಜ್ವರ ಕಾಣಿಸಿಕೊಂಡಿದೆ.


ಸಿದ್ದರಾಮಯ್ಯ ಅವರಿಗೂ COVID-19 ಪಾಸಿಟಿವ್; ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ಆಗುವಂತೆ ಮನವಿ


ಸಿದ್ದರಾಮಯ್ಯ ಅವರಿಗೆ ನಿನ್ನೆಯೂ ಜ್ವರ ಇತ್ತು. ಹಾಗಾಗಿ ವೈದ್ಯರು ಜ್ವರ ಕಡಿಮೆ ಆಗಲು ನಿನ್ನೆ ಚಿಕಿತ್ಸೆ ನೀಡಿದ್ದರು. ಆದರೆ ಇಂದು ಬೆಳಿಗ್ಗೆಯ ಪರೀಕ್ಷೆ ವೇಳೆ ಇನ್ನೂ ಜ್ವರ ಇದೆ ಎಂದು ಗೊತ್ತಾಗಿದೆ. ಜ್ವರ ಇರುವುದರಿಂದ ಇನ್ನೂ ಕೆಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅವುಗಳ ವರದಿ ಬಂದ ನಂತರ ಮುಂದಿನ ಚಿಕಿತ್ಸೆ ಕೊಡಲು ನಿರ್ಧಾರ ಮಾಡಲಾಗಿದೆ.


ಸಿದ್ದರಾಮಯ್ಯ ಅವರಿಗೆ ಜ್ವರ ಹಾಗೂ ಮೂತ್ರಪಿಂಡದ ಸಮಸ್ಯೆ ಕೂಡ‌ ಇರುವುದರಿಂದ ಮೂತ್ರಪಿಂಡದ ಸಮಸ್ಯೆ ಬಗ್ಗೆಯೂ ತಪಾಸಣೆ ನಡೆಸಲಾಗುತ್ತಿದೆ. ನುರಿತ ವೈದ್ಯರಿಂದ ಸಿದ್ದರಾಮಯ್ಯ ಅವರಿಗೆ ಚಿಕಿತ್ಸೆ ‌ಕೊಡಿಸಲಾಗುತ್ತಿದ್ದು, ಸಿದ್ದರಾಮಯ್ಯ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.


ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಹರಿದುಬರುತ್ತಿದೆ ಶುಭಾ ಹಾರೈಕೆಗಳ ಮಹಾಪೂರ


ನಿನ್ನೆಗೆ ಹೋಲಿಕೆ ಮಾಡಿಕೊಂಡರೆ ಸಿದ್ದರಾಮಯ್ಯ ಸ್ವಲ್ಪ ಗುಣಮುಖರಾಗಿದ್ದಾರೆ. ಆದರೆ ಪೂರ್ಣ ಪ್ರಮಾಣದಲ್ಲಿ ಗುಣ ಆಗಿಲ್ಲದ ಕಾರಣ ತಪಾಸಣೆ ಮತ್ತು ಚಿಕಿತ್ಸೆಗಳನ್ನು ಮುಂದುವರೆಸಲಾಗುತ್ತಿದೆ. ಸ್ವತಃ ವೈದ್ಯರೂ ಆಗಿರುವ ಸಿದ್ದರಾಮಯ್ಯ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ವೈದ್ಯರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.