ಬೆಂಗಳೂರು: COVID-19 ಮಹಾಮಾರಿಯ ಕಾರಣಕ್ಕೆ ಈ ವರ್ಷ ಶಾಲೆಗಳು ಆರಂಭವಾಗುತ್ತವೋ ಇಲ್ಲವೋ ಎಂದು ಉದ್ಭವಿಸಿದ್ದ ಗೊಂದಲ ಬಹುತೇಕ ಬಗೆಹರಿದಿದೆ. ಏಕೆಂದರೆ ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವುದಾಗಿ ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಶಾಲೆಗಳನ್ನು (Schools) ಆರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುತ್ತಿರುವ ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಯ ಸಲಹೆಯನ್ನೂ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯು ಜನವರಿ 1ರಿಂದ ಶಾಲೆಗಳನ್ನು ಆರಂಭಿಸಬಹುದು ಎಂದು ತಿಳಿಸಿರುವುದಾಗಿ ಗೊತ್ತಾಗಿದೆ.

ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ  ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪತ್ರ ಬರೆದಿದ್ದು ಆರೋಗ್ಯ ಇಲಾಖೆ ವತಿಯಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.


ಮಧ್ಯಪ್ರದೇಶದಲ್ಲಿ ಈ ವಾರದಿಂದಲೇ ಶಾಲೆ ತೆರೆಯಲು ನಡೆದಿದೆ ಸಿದ್ಧತೆ


ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಮ್ಮ ಪತ್ರದಲ್ಲಿ 9, 10 ಮತ್ತು 12ನೇ ತರಗತಿಗಳನ್ನು ಆರಂಭಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ COVID-19 ಮಾರ್ಗಸೂಚಿಯನ್ನು ಚಾಚೂ ತಪ್ಪದೆ ಅನುಸರಿಸರಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಬೇಸಿಗೆ ರಜೆಯನ್ನು ಬಲಿ ಪಡೆಯುವುದೇ ಕೊರೊನಾ?


ಆರೋಗ್ಯ ಇಲಾಖೆಯಿಂದ ಹಸಿರು ನಿಶಾನೆ ಸಿಕ್ಕಿರುವುದರಿಂದ ಈಗ ಶಿಕ್ಷಣ ಇಲಾಖೆ ಕಾರ್ಯಪ್ರವೃತ್ತವಾಗಬೇಕಿದೆ. ಈಗಾಗಲೇ ಜನವರಿಯಿಂದ ವಿದ್ಯಾಗಮ ಕಾರ್ಯಕ್ರಮ ಆರಂಭಿಸುವ ತಯಾರಿ ನಡೆದಿದ್ದು ಈಗ 9, 10 ಮತ್ತು 12ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಕೂಡ ನಿರ್ಧಾರ ಕೈಗೊಳ್ಳಬೇಕಿದೆ.