ಪುಟ್ಟ ಕಂದ ಆರ್ಯನ್ ಗೆ ಆಸರೆಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Dinesh Gundurao: ಸ್ಪೈನಲ್ ಮಸ್ಕ್ಯುಲಾರ್ ಅಟ್ರೋಫಿ (ಎಸ್‌ಎಂಎ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮುಗು ಆರ್ಯನ್ ಇದೀಗ ಆರೋಗ್ಯ ಸಚಿವರ ಆಸರೆಯಿಂದ  ಹೊಸ ಜೀವನವನ್ನು ಪಡೆದುಕೊಂಡಿದೆ. 

Written by - Savita M B | Last Updated : Jul 11, 2024, 02:11 PM IST
  • ಎರಡು ವರ್ಷದ ಮಗು ಆರ್ಯನ್ ಮೂರ್ತಿ, SMA ಟೈಪ್ 2 ನಿಂದ ಬಳಲುತ್ತಿದೆ
  • ಪುಟ್ಟ ಮಗುವಿನ ಚಿಕಿತ್ಸೆಗೆ ದೇಣಿಗೆ ನೀಡಲು ಇಚ್ಚಿಸುವವರಿಗೆ ಇಲ್ಲಿದೆ ಮಾಹಿತಿ
ಪುಟ್ಟ ಕಂದ ಆರ್ಯನ್ ಗೆ ಆಸರೆಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ title=

Health Minister Dinesh Gundu Rao: ಎರಡು ವರ್ಷದ ಮಗು ಆರ್ಯನ್ ಮೂರ್ತಿ, SMA ಟೈಪ್ 2 ನಿಂದ ಬಳಲುತ್ತಿದ್ದು, ಇದು ಕ್ಷೀಣಗೊಳ್ಳುವ ಜೆನೆಟಿಕ್ ಡಿಸಾರ್ಡರ್ ಮತ್ತು ಪ್ರಗತಿಶೀಲ ಸ್ನಾಯು ಕ್ಷೀಣತೆ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ಇದರಿಂದಾಗಿ ನಡೆಯಲು ಮತ್ತು ಅಂತಿಮವಾಗಿ ಉಸಿರಾಟದ ತೊಂದರೆ ಉಂಟಾಗುತ್ತದೆ. ಆರ್ಯನ್ ಗೆ ಜೀನ್ ಥೆರಪಿ ಇಂಜೆಕ್ಷನ್ ಝೋಲ್ಜೆನ್ಸ್ಮಾ ಚಿಕಿತ್ಸೆ ಅಗತ್ಯವಾಗಿದ್ದು ಇದಕ್ಕೆ ಬರೋಬ್ಬರಿ 16 ಕೋಟಿ ವೆಚ್ಚವಾಗಲಿದೆ. ಈ ನಿಟ್ಟಿನಲ್ಲಿ ಮಗುವಿನ ಪಾಲಕರು ಕ್ರೌಂಡ್ ಫಂಡಿಂಗ್ ಕಲೆಹಾಕು ಪ್ರಯತ್ನ ನಡೆಸುತ್ತಿದ್ದಾರೆ. 

ದುಬಾರಿ ಚಿಕಿತ್ಸೆ ಹಿನ್ನೆಲೆಯಲ್ಲಿ ಮಗುವಿನ ಪಾಲಕರು ಸಹಾಯಕ್ಕಾಗಿ ಆರೋಗ್ಯ ಸಚಿವರನ್ನು ಸಂಪರ್ಕಿಸಿದ್ದರು. ಮುಗುವಿನ ಮುದ್ಗ ಮುಖ ನೋಡಿ ಮರುಗಿದ ಸಚಿವ ದಿನೇಶ್ ಗುಂಡೂರಾವ್, ಮುಗಿವಿಗೆ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ನೆರವಾಗಿದ್ದಾರೆ. ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಮತ್ತು ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಟ್ರಸ್ಟ್ ಎಂಬ ಎನ್‌ಜಿಒ ಮೂಲಕ ಆರ್ಯನ್‌ಗೆ ಜೀವಮಾನದ ಔಷಧಿಯನ್ನು ಒದಗಿಸಲು ಒಪ್ಪಂದವನ್ನು ಮಾಡಿಸಿ ಕೊಟ್ಟಿದ್ದಾರೆ.  

ಈ ರೀತಿಯ ರೋಗಗಳಿಗೆ ದುಬಾರಿ ಮೊತ್ತದ ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಅವಕಾಶ ಕಲ್ಪಿಸುವತ್ತ ಮಾರ್ಗೋಪಾಯಗಳನ್ನ ಕಂಡುಕೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ಎಸ್‌ಸಿ/ಎಸ್‌ಟಿ) ರೋಗಿಗಳಿಗೆ ಅಪರೂಪದ, ಅಧಿಕ ವೆಚ್ಚದ ಕಾಯಿಲೆಗಳಿಗೆ ನೀಡಲಾಗುವ ವಿತ್ತೀಯ ನೆರವಿನಡಿಯಲ್ಲಿ SMA ರೋಗವನ್ನ ಸೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. 

ಪ್ರಸ್ರುತ ಮಗುವಿಗೆ ರಿಸ್ಡಿಪ್ಲಾಮ್ ಔಷಧದ ಚಿಕಿತ್ಸೆಯನ್ನ ನೀಡಲಾಗುತ್ತಿದ್ದು, ಮಗುವಿನ 11 ಕೆಜಿ ತೂಕದ ಆಧಾರದ ಮೇಲೆ ವರ್ಷಕ್ಕೆ 48 ಲಕ್ಷ ರೂಪಾಯಿಗಳಷ್ಟಾಗಲಿದೆ. ಮಗು 20 ಕೆಜಿ ತಲುಪಿದಾಗ ಈ ವೆಚ್ಚವು 73 ಲಕ್ಷಕ್ಕೆ ಏರುವ ನಿರೀಕ್ಷೆಯಿದೆ. 
ಸಚಿವರಿಂದ ಸಿಕ್ಕ ಸ್ಪಂದನೆಗೆ ಅಭಿನಂದನೆ ಸಲ್ಲಿಸಿರುವ ಮಗುವಿನ ಪಾಲಕರು, ಸಾರ್ವಜನಿಕರಲ್ಲಿ ಹೆಚ್ಚಿನ ನೆರವಿನ ಹಸ್ತ ಚಾಚಿದ್ದಾರೆ.

ಪುಟ್ಟ ಮಗುವಿನ ಚುಕಿತ್ಸೆಗೆ ದೇಣಿಗೆ ನೀಡಲು ಇಚ್ಚಿಸುವವರಿಗೆ ಇಲ್ಲಿದೆ ಮಾಹಿತಿ 
Below are the two links for donations: 

Impactguru -For inside India
https://www.impactguru.com/fundraiser/help-aryan-murthy

Gofundme -For outside India
 https://gofund.me/87552239

Gpay no
9538851328-Nirnay Murthy
9901631933-Moiteii Hmar

Aryan’s Personal Account:
Account Name: Aryan Murthy (self)
AccountNumber: 0694104000265935 IFSCCode::IBKL0000694
Bank: IDBI (Yelahanka New Town branch) Bangalore 560064
Pan Number: AMGPN2988L

Kindly follow us on @aryan_fights_sma
https://www.instagram.com/aryan_fights_sma?igsh=MWo4ejhlMmp3Y3kzcQ==

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News