ಬೆಂಗಳೂರು: ಪಶ್ಚಿಮ ಘಟ್ಟದ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿರಿಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಉತ್ತರ ಕನ್ನಡ ಜಿಲ್ಲೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಇದನ್ನೂ ಓದಿ: ಬ್ಯಾಂಕ್ ಸಾಲದಲ್ಲಿ ವಂಚನೆ: SLN CNC ಟೆಕ್ ಮತ್ತು ಕೆನರಾ ಬ್ಯಾಂಕ್ ವಿರುದ್ಧ ತನಿಖೆ ಚುರುಕು!
ಪ್ರತಿ ವರ್ಷ ಸಾಗರ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಂಗನ ಕಯಾಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಭಾಗದ ಜನರಲ್ಲಿ ಕೆಮ್ಮು ಜ್ಚರದಂತ ಲಕ್ಷಣಗಳು ಕಾಣಿಸಿಕೊಂಡಾಗ ಆರಂಭಿಕ ಹಂತದಲ್ಲಿಯೇ ಟೆಸ್ಟ್ ಮಾಡಿ ಮಂಗನ ಕಾಯಿಲೆಯನ್ನ ಖಚಿತಪಡಿಸಿಕೊಂಡು ತಕ್ಷಣ ಚಿಕಿತ್ಸೆ ನೀಡಬೇಕು. ಅಲ್ಲದೇ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಚಿವ ಗುಂಡೂರಾವ್ ಸೂಚನೆ ನೀಡಿದರು.
ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಎಫ್ ಡಿ ಟೆಸ್ಟ್ ಹೆಚ್ಚಿನ ರೀತಿಯಲ್ಲಿ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ರಾಜ್ಯದಲ್ಲಿ ಒಟ್ಟು 65 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದವರಲ್ಲಿ 26 ಜನರು ಗುಣಮುಖರಾಗಿದ್ದಾರೆ. 37 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಲಾಟರಿನಾ-ಬಂಪರ್ ಲಾಟರಿನಾ ಗೊತ್ತಾಗಲಿದೆ: ಡಿಕೆಶಿಗೆ ವಿಜಯೇಂದ್ರ ಡಿಚ್ಚಿ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.