ಬೆಂಗಳೂರು: ವೈದ್ಯರನ್ನ ದೈವತ್ವಕ್ಕೆ ಹೊಲಿಸಿರುವುದರ ಹಿನ್ನಲೆ ಇದೊಂದು ಸೇವಾ ಮನೋಭಾವದ ಕಾರ್ಯ ಎಂಬುದನ್ನ ಅರ್ಥಮಾಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ವೈದ್ಯರಿಗೆ ಅಗತ್ಯ ಸೌಕರ್ಯಗಳನ್ನ ಒದಗಿಸಿಕೊಡಲು ಸರ್ಕಾರ ಬದ್ಧವಾಗಿದೆ. ಒಂದು ಸರ್ಕಾರವಾಗಿ ವೈದ್ಯರನ್ನ ನಾವು ಚೆನ್ನಾಗಿ ನೋಡಿಕೊಂಡರೆ, ನಮ್ಮ ಜನರ ಆರೋಗ್ಯವನ್ನು ವೈದ್ಯರು ಚೆನ್ನಾಗಿ ನೋಡಿಕೊಳ್ತಾರೆ ಎಂಬ ನಂಬಿಕೆ ನನಗಿದೆ ಎಂದು ಸಚಿವರು ಹೇಳಿದರು. 


COMMERCIAL BREAK
SCROLL TO CONTINUE READING

ನಮ್ಮ ಸರ್ಕಾರ ಬಂದ ಬಳಿಕ ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಪ್ರಯತ್ನ ಮಾಡಿದ್ದೇವೆ. ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಯೇ ಸರಬರಾಜು ಆಗುತ್ತಿರಲಿಲ್ಲ. ಶೇ 30 ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿ ಪೂರೈಕೆಯಾಗುತ್ತಿತ್ತು. ಇದೀಗ ಸಾಕಷ್ಟು ಸುಧಾರಣೆ ತಂದಿದ್ದು, ಶೇ 80 ರಷ್ಟು ಔಷಧಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುತ್ತಿದೆ. ಮುಂಬರುವ ಎರಡು ತಿಂಗಳೊಳಗೆ ಸಂಪೂರ್ಣವಾಗಿ ಔಷಧಿ ಸರಬರಾಜನ್ನ ಸರಿಪಡಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯರಿಗೆ ಭರವಸೆ ನೀಡಿದರು. 


ಇದನ್ನೂ ಓದಿ:  ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದರಾಮಯ್ಯ


ಕಳೆದ 30 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆಯಾಗಿರಲಿಲ್ಲ. ಇದೀಗ ಪರಿಷ್ಕರಣೆ ಅಂತಿಮ ಹಂತದಲ್ಲಿದ್ದು, ಒಂದು ತಿಂಗಳ ಒಳಗಾಗಿ ಜಾರಿಗೆ ಬರಲಿದೆ.  ವಿಶೇಷವಾಗಿ 8 ವರ್ಷಗಳ ಬಳಿಕ ಆರೋಗ್ಯ ಇಲಾಖೆ ವರ್ಗಾವಣೆಯನ್ನ ಪೂರ್ಣ ಪ್ರಮಾಣದಲ್ಲಿ ಕೌನ್ಸಿಲಿಂಗ್ ಮೂಲಕ ನಡೆಸಲಾಗುತ್ತಿದ್ದು, ಪಾರದರ್ಶಕ ಆಡಳಿತವನ್ನ ಇಲಾಖೆಯಲ್ಲಿ ತರಲಾಗಿದೆ ಎಂದರು. 


ಡಯಾಲಿಸಿಸ್ ವ್ಯವಸ್ಥೆಯನ್ನ ಸದೃಢಗೊಳಿಸಲಾಗಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಇಂದು ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಲ್ಲಿ ಸಹಕಾರಿಯಾಗಿದೆ. ನಮ್ಮ ವೈದ್ಯರು ಮನಸ್ಸು ಮಾಡಿದರೆ ರಾಜ್ಯದ ಬಡವರು ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬಹುದು. ಬಿ.ಸಿ ರಾಯ್ ಅವರು ಪಶ್ಮಿಮ ಬಂಗಾಳ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೂ ಅವರ ವೃತ್ತಿ ಮರೆತಿರಲಿಲ್ಲ.‌ ಅವರ ಜನ್ಮದಿನದಂದು ಆಚರಿಸುವ ವೈದ್ಯರ ದಿನಾಚರಣೆ ಎಲ್ಲ ವೈದ್ಯರಿಗೆ ಪ್ರೇರಣೆಯಾಗಲಿ. ಇನ್ನೂ ಹೆಚ್ಚು ಸೇವಾ ಮನೋಭಾವದೊಂದಿಗೆ ವದ್ಯರು ಜನರಿಗೆ ಗಣಮಟ್ಟದ ಆರೋಗ್ಯ ಸೇವೆ ಒದಗಿಸುವಂತಾಗಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಆಶಯ ವ್ಯಕ್ತಪಡಿಸಿದರು.


ಇದನ್ನೂ ಓದಿ: ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ: ಗೃಹ ಸಚಿವ ಜಿ.ಪರಮೇಶ್ವರ  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.