K Sudhakar: 1 ರಿಂದ 9ನೇ ತರಗತಿ ಪರೀಕ್ಷೆ ರದ್ದು; ' ಶೀಘ್ರದಲ್ಲಿ ರಾಜ್ಯ ಸರ್ಕಾರದಿಂದ ನಿರ್ಧಾರ'!

1 ರಿಂದ 9 ನೇ ತರಗತಿ ಪರೀಕ್ಷೆ ರದ್ದು ಮಾಡುವುದರ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವ ನಿರ್ಧಾರ

Last Updated : Mar 28, 2021, 03:35 PM IST
  • 1 ರಿಂದ 9 ನೇ ತರಗತಿ ಪರೀಕ್ಷೆ ರದ್ದು ಮಾಡುವುದರ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವ ನಿರ್ಧಾರ
  • ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್
  • ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ
K Sudhakar: 1 ರಿಂದ 9ನೇ ತರಗತಿ ಪರೀಕ್ಷೆ ರದ್ದು; ' ಶೀಘ್ರದಲ್ಲಿ ರಾಜ್ಯ ಸರ್ಕಾರದಿಂದ ನಿರ್ಧಾರ'! title=

ಬೆಂಗಳೂರು: 1 ರಿಂದ 9 ನೇ ತರಗತಿ ಪರೀಕ್ಷೆ ರದ್ದು ಮಾಡುವುದರ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವ ನಿರ್ಧಾರವನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್(Dr K Sudhakar), ಇನ್ನೂ ಈ ಬಾರಿಯೂ ಒಂದರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಅಂಥ ಹೇಳಿದರು, ಇದಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದ್ರು.

Spiders On Mars: ವಿಜ್ಞಾನಿಗಳ ನಿದ್ದೆಗೆಡಿಸಿದ ಮಂಗಳನ ಅಂಗಳದ ಜೇಡರಹುಳ ಆಕೃತಿಗಳ ರಹಸ್ಯ

ಇದೇ ವೇಳೆ ಕರೋನ ಸೊಂಕಿ(Coronavirus)ಗೆ ಸಂಬಂಧಪಟ್ಟಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ಕೆಲವೊಂದು ಸಲಹೆಗಳನ್ನು ಪಡೆದುಕೊಳ್ಳಲಾಗುವುದು ಅಂತ ಹೇಳಿದ ಅವರು 1 ರಿಂದ 9 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ನಾಳೆ ಅಂತಿಮ ನಿರ್ಧಾರವನ್ನು ಪ್ರಕಟ ಮಾಡಲಾಗುವುದು ಅಂತ ಹೇಳಿದ್ರು.

"ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಹತಾಶೆ ಮಾತಿಗೆ ಉತ್ತರಿಸುವುದಿಲ್ಲ'

ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಆತಂಕವನ್ನು ನಿರ್ಮಾಣ ಮಾಡಿದೆ. ಈ ಹಿನ್ನಲೆಯಲ್ಲಿ ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ ಎಂದು ಅವರು ಆತಂಕ ವ್ಯಕ್ತಪಡಿಸಿದರು.

Ramesh Jarkiholi: ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಕೆಂಡಾಮಂಡಲವಾಗಿ ಹಿಗ್ಗಾಮುಗ್ಗಾ ವಾಗ್ದಾಳಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ... 
Android Link -
 https://bit.ly/3hDyh4G 
Apple Link - https://apple.co/3loQYe  
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News