ದಾವಣಗೆರೆ : ಮಹಾಮಾರಿ ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ನಂತರವೂ ಮತ್ತೆ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸುಧಾಕರ್(K Sudhakar), ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಸಿಎಂ ಯಡಿಯೂರಪ್ಪನವರ ವಿಸ್ತರಣೆಗೆ ಒಲವು ತೋರಿದ್ದಾರೆ. ಮೇ 22 ಅಥವಾ 23ರಂದು ಲಾಕ್ ಡೌನ್ ನಿರ್ಧಾರ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Covid-19 Vaccination : ರಾಜ್ಯದಲ್ಲಿ ನಾಳೆಯಿಂದ 18 ರಿಂದ 44 ವಯಸ್ಸಿನವರಿಗೆ ಕೊರೋನಾ ಲಸಿಕೆ!
ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿರುವ ಕೊರೋನಾ ನಿಯಂತ್ರಿಸಬೇಕು ಎಂದರೆ ರಾಜ್ಯದಲ್ಲಿ ಇನ್ನಷ್ಟು ದಿನ ಲಾಕ್ ಡೌನ್(Lockdown Extending) ಮುಂದುವರೆಸುವುದು ಅನಿವಾರ್ಯ. ಇದರಿಂದ ಸಾವು-ನೋವನ್ನು ತಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ ರೆಮ್ ಡಿಸಿವಿರ್ ಕೊರತೆಯಿಲ್ಲ. 10 ಲಕ್ಷ ರೆಮ್ ಡಿಸಿವಿರ್ ತರಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ : Lockdown Extension : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ! ಸಿಎಂ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.