ಪ್ರತಿಭಟನೆ ಹೆಸರಿನಲ್ಲಿ ಕೈ ನಾಯಕರು ಈ ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ: ಸಚಿವ ಸುಧಾಕರ್
ಪ್ರತಿಭಟನೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಈ ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಪ್ರತಿಭಟನೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಈ ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕರೆಯುವುದೇ ತಪ್ಪಾ? ಉನ್ನತ ಸ್ಥಾನದಲ್ಲಿ ಇದ್ದವರಿಗೆ ಒಂದು ಕಾನೂನು ಶ್ರೀಸಾಮಾನ್ಯನಿಗೆ ಮತ್ತೊಂದು ಕಾನೂನು ಇಲ್ಲ. ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ ಎಂಬ ಸಾಮಾನ್ಯ ಜ್ಞಾನ ಅವರಿಗೆ ಇದ್ದಂತಿಲ್ಲ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: "ಕೋವಿಡ್ ಗಾಳಿ ಮೇಲೆ ಬರಬಹುದು, ಉಸಿರಾಟದ ತೊಂದರೆಯಾಗಿ ಜನ ಬಿದ್ದು ಸಾಯಬಹುದು": ಕೋಡಿಹಳ್ಳಿ ಶ್ರೀ ಭವಿಷ್ಯ
ಈ ನೆಲದ ಕಾನೂನು ಗೌರವಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಮತ್ತು ಜವಾಬ್ದಾರಿ. ಇದನ್ನು ಉನ್ನತ ಸ್ಥಾನಗಳನ್ನು ಅಲಂಕರಿಸಿರುವವರು ಪಾಲಿಸುವ ಮೂಲಕ ಮೇಲ್ಪಂಕ್ತಿ ಹಾಕಿಕೊಡಬೇಕು. ಅದನ್ನು ಬಿಟ್ಟು ಅವರೇ ಕಾನೂನು ಉಲ್ಲಂಘನೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ ಎಂದು ಆರೋಪಿಸಿದರು.
ಈ ಹಿಂದೆ ಪ್ರಧಾನಿ ಹುದ್ದೆ ಅಲಂಕರಿಸಿದ್ದವರೇ ವಿಚಾರಣೆಗಳಿಗೆ ಹಾಜರಾಗಿದ್ದ ನಿದರ್ಶನಗಳಿವೆ. ಪ್ರತಿಭಟಿಸಿದ ಕಾಂಗ್ರೆಸ್ ನಾಯಕರು ಅದನ್ನು ಮರೆತಂತಿದೆ. ಯಾವುದೇ ಸಂವಿಧಾನಬದ್ಧ ಹುದ್ದೆಗಳನ್ನೂ ಅಲಂಕರಿಸದವರೇ ಕಾನೂನು ಗೌರವಿಸುವುದಿಲ್ಲ ಎಂದರೆ ಹೇಗೆ? ಇದು ಕಾಂಗ್ರೆಸ್ಸಿಗರ ಸಂಸ್ಕೃತಿ ಮತ್ತು ಮನೋಭಾವ. ಕಾಂಗ್ರೆಸ್ಸಿಗರಲ್ಲಿ ದೊಡ್ಡವರಿಗೊಂದು ಜನಸಾಮಾನ್ಯರಿಗೆ ಒಂದು ಕಾನೂನು ಮಾಡುವ ಯೋಚನೆ ಹೊಂದಿದ್ದರೂ ಇರಬಹುದು ಎಂದು ಲೇವಡಿ ಮಾಡಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಪಕ್ಷಾಂತರ ಹಾಗೂ ಕುದುರೆ ವ್ಯಾಪಾರದ ನಿಜವಾದ ಕಿಂಗ್: ಬಿಜೆಪಿ
ಪ್ರತಿಭಟನೆ ಹೆಸರಿನಲ್ಲಿ ಇಂದು ಕಾಂಗ್ರೆಸ್ ಮುಖಂಡರು ನಡೆಸಿರುವ ದಾಂಧಲೆಯಿಂದ ನಗರದಲ್ಲಿಸಾರ್ವಜನಿಕರ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ಫ್ರೀಡಂಪಾರ್ಕಿನ ಬಳಿ ಅನುಮತಿ ಪಡೆದು ಪ್ರತಿಭಟನೆ ನಡೆಸಬೇಕು ಎಂಬ ಕೋರ್ಟ್ ನಿರ್ದೇಶನವನ್ನೂ ಉಲ್ಲಂಘಿಸಿದ್ದಾರೆ. ಸರ್ಕಾರ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನದೇ ಆದ ಕ್ರಮ ಜರುಗಿಸಲಿದೆ ಎಂದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.