ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆಯ ಸಭೆ ನಡೆಸಿ ಕ್ರಮ ವಹಿಸಲಾಗುವುದು. ಜನರ ಸುರಕ್ಷತಾ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ಲಸಿಕೆಯ ಮೂರನೇ ಡೋಸ್ ಪಡೆಯಲು ಸೂಚಿಸಲಾಗಿದೆ. ಆದರೆ ಇದನ್ನು ಹೆಚ್ಚಿನವರು ಪಾಲಿಸುತ್ತಿಲ್ಲ. ಇನ್ನೂ 29-30 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ ಎಂದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹುಬ್ಬಳ್ಳಿ ಕೋಮು ಗಲಭೆಗೆ ಕಾಂಗ್ರೆಸ್ ಪಕ್ಷವೇ ರೂವಾರಿ: ಬಿಜೆಪಿ ಆರೋಪ


ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿದಂತೆ ಹಲವು ಕ್ರಮ ವಹಿಸಲಾಗಿದೆ. ಆದರೂ ಬೇರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾದಾಗ ಸಹಜವಾಗಿ ಹರಡುತ್ತದೆ. ಆದ್ದರಿಂದ ಜನರು ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹೆಚ್ಚಾಗಿ ನೀಡಿರುವುದರಿಂದ ಮೂರನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ, ಬಿಜೆಪಿ ಬೆಂಕಿಗೆ ಕಾಂಗ್ರೆಸ್ ಪೆಟ್ರೋಲ್: ಎಚ್.ಡಿ.ಕುಮಾರಸ್ವಾಮಿ


ರಾಜ್ಯದಲ್ಲಿ 97.9% ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಅನ್ನು ಪಡೆದವರ ಪ್ರಮಾಣ 100% ದಾಟಿದೆ. 12 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನವರಿಗೆ ಲಸಿಕೆ ಕೊಡಿಸಬೇಕಿದೆ. ಪೋಷಕರು ಈ ಬಗ್ಗೆ ಗಮನ ನೀಡಬೇಕು ಎಂದರು.


ಭ್ರಷ್ಟಾಚಾರ ಹುಟ್ಟುಹಾಕಿದ ಪಕ್ಷ ಕಾಂಗ್ರೆಸ್:


25 ವರ್ಷ ಮೇಲ್ಪಟ್ಟವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಇದು ಸಂವಿಧಾನ ನೀಡಿರುವ ಅವಕಾಶವಿದೆ. ಅದೇ ಆಧಾರದಲ್ಲಿ ಸ್ವಾಮೀಜಿಗಳು ಕೂಡ ಸ್ಪರ್ಧೆ ಮಾಡಬಹುದು. ಕಾಂಗ್ರೆಸ್ ಪಕ್ಷವು ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಪಕ್ಷವಾಗಿದೆ. ಕಾಂಗ್ರೆಸ್ಸಿಗರು ಇದೇ ಭ್ರಷ್ಟಾಚಾರದ ಆರೋಪವನ್ನು ಮಾಡಿ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಬೇರೆ ರಾಜ್ಯಗಳಲ್ಲಿ ವಿಫಲರಾದಂತೆಯೇ ಕರ್ನಾಟಕದಲ್ಲೂ ಅವರು ವಿಫಲರಾಗುವುದು ಖಚಿತ ಎಂದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.