ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯ ಫೆ.26ಕ್ಕೆ ಮುಂದೂಡಿದೆ.


COMMERCIAL BREAK
SCROLL TO CONTINUE READING

ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ನ್ಯಾಯಾಲಯವನ್ನು ಕೋರಿದ್ದು ಈ ಕೋರಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಫೆಬ್ರವರಿ 26ರಂದು ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿ, ವಿಚಾರಣೆ ಮುಂದೂಡಿದ್ದಾರೆ.


ಹಲ್ಲೆ ಪ್ರಕರಣ : ನಲಪಾಡ್'ಗೆ 14 ದಿನಗಳ ನ್ಯಾಯಾಂಗ ಬಂಧನ


ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು. 


ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣು


ಈ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಲಪಾಡ್ ಸೇರಿದಂತೆ 7 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.