ಪತ್ನಿ ನಿಧನದ ಸುದ್ದಿ ಕೇಳಿ ಪತಿಗೆ ಹೃದಯಾಘಾತ: ಸಾವಿನಲ್ಲೂ ಒಂದಾದ ದಂಪತಿ
Viral News: ಪತ್ನಿ ನಿಧನದ ಸುದ್ದಿ ಕೇಳಿ ಪತಿಯೂ ಮೃತಪಟ್ಟ ಧಾರುಣ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ: ಮಂಗಲ ಗ್ರಾಮದ ಶೇಖರ್ (70) ಹಾಗೂ ಸುಮಿತ್ರಮ್ಮ (65) ಎಂದು ಮೃತ ದಂಪತಿಗಳು. ದಂಪತಿಗಳಿಬ್ಬರು ಕೃಷಿಕರಾಗಿದ್ದು ಮಂಗಲ ಸಮೀಪದ ರಾಮನಗುಡ್ಡ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಇದನ್ನೂ ಓದಿ-ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ
ಶೇಖರ್ ರವರ ಪತ್ನಿ ಸುಮಿತ್ರಮ್ಮ ಗೆ ಶುಕ್ರವಾರ ಮುಂಜಾನೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕಾಮಗೆರೆ ಬಳಿ ಇರುವ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಿತ್ರಮ್ಮ ಶುಕ್ರವಾರ ರಾತ್ರಿ ಮೃತಪಟ್ಟಿದ್ದು ಈ ವಿಚಾರ ತಿಳಿಯುತ್ತಿದ್ದಂತೆ ಪತಿ ಶೇಖರ್ ಕೂಡ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ-ಲೋಕಾಯುಕ್ತರು ಸಿಬಿಐಗಿಂತ ಹೆಚ್ಚು ಹಿಂಸೆ ಕೊಡ್ತಿದ್ದಾರೆ
ಜೀವನ ಜಂಜಾಟದಲ್ಲಿ ಒಂದಾಗಿದ್ದ ದಂಪತಿಗಳು ಸಾವಿನಲ್ಲೂ ಒಂದಾಗಿರುವುದು ಇವರ ಆದರ್ಶ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.