ಬೆಂಗಳೂರು : Heat Waves red alert : ಮೇ ತಿಂಗಳು ಆರಂಭವಾಗಿದೆ.ಆದರೆ ರಾಜ್ಯದಲ್ಲಿ ಇದುವರೆಗೂ ಮಳೆ ಬಿದ್ದಿಲ್ಲ.ಉತ್ತರ ಭಾರತದಂತೆ ಕರ್ನಾಟಕದಲ್ಲಿಯೂ ಬಿಸಿಲ ತಾಪ ಏರುತ್ತಿದೆ. ದಿನೇ  ದಿನೇ ಸೂರ್ಯನ ಶಾಖ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಅಥವಾ ಬಿಸಿ ಗಾಳಿ ಏಳುತ್ತಿದೆ. ಮುಂದಿನ ದಿನಗಳಲ್ಲಿ  ಉಷ್ಣ ಅಲೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡಾ ಘೋಷಿಸಿದೆ. 


COMMERCIAL BREAK
SCROLL TO CONTINUE READING

ಹವಾಮಾನ ಇಲಾಖೆಯ ಎಚ್ಚರಿಕೆಯ ಪ್ರಕಾರ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, 
ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಸೆಕೆ ವಿಪರೀತ ಹೆಚ್ಚಾಗಲಿದೆ.


ಇದನ್ನೂ ಓದಿ : ನರೇಂದ್ರ ಮೋದಿಯವರ ನಿಜಬಣ್ಣ ಬಯಲು : ಸಿಎಂ ಸಿದ್ದರಾಮಯ್ಯ


ಮಳೆ ಯಾವಾಗ? :
ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 


ಯಾವ ನಗರದಲ್ಲಿ ಎಷ್ಟು ಉಷ್ಣಾಂಶ : 
ಕಲಬುರ್ಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಹೆಚ್ಎಎಲ್ ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ 
ನಗರದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ಕೆಐಎಎಲ್ ನಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,
ಜಿಕೆವಿಕೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,  21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ಪಣಂಬೂರಿನಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


ಇದನ್ನೂ ಓದಿ : ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ-ಸಿಎಂ ಸಿದ್ದರಾಮಯ್ಯ


ಬೆಳಗಾವಿಯಲ್ಲಿ37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ಬೀದರ್ ನಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ವಿಜಯಪುರದಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,
ಬಾಗಲಕೋಟೆಯಲ್ಲಿ 42.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,
ಧಾರವಾಡದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ಕೊಪ್ಪಳದಲ್ಲಿ 41.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 
ರಾಯಚೂರಿನಲ್ಲಿ 42.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz


Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.