Heavy Rain : ರಾಜ್ಯಾದ್ಯಂತ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ
ಇಂದು ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಶುರುವಾಗಿದ್ದು, ನಿನ್ನೆ ಕೆಲವು ಜಿಲ್ಲೆಗಳಲ್ಲಿ ಸ್ವಲ್ಪ ಬಿಸಿಲು ಕಾಣಿಸಿಕೊಂಡಿದೆ, ಹಲವೆಡೆ ತುಂತುರು ಮಳೆಯಾಗಿದೆ. ಆದರೆ, ಇಂದು ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ. ರಾಜ್ಯ ಮಾತ್ರವಲ್ಲದೆ, ನೆರೆಯ ರಾಜ್ಯಗಳಲ್ಲೂ ಮಳೆಯಾಗುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಇಂದು ಭಾರೀ ಮಳೆಯಾಗಲಿದೆ.
ಇದನ್ನೂ ಓದಿ : ಅಂಜನಾದ್ರಿ ಪರ್ವತ ಅಭಿವೃದ್ಧಿಗೆ ಸರ್ಕಾರ ತೀರ್ಮಾನ : ಸಚಿವ ಸಿ.ಪಿ.ಯೋಗೇಶ್ವರ
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೂರ್ನಾಲ್ಕು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ(Heavy Rain) ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದು ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : Mohammed Nalapad : ಡಿ.31ರ ಬಳಿಕ 'ಯುವ ಕಾಂಗ್ರೆಸ್ ನೂತನ ಅಧ್ಯಕ್ಷ'ರಾಗಿ ನಲಪಾಡ್ ಆಯ್ಕೆ
ಕರಾವಳಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆ(Rain)ಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಇಂದು ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : Heavy Rain in Karnataka : ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.