Heavy Rain Alert In Karnataka: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಭಾರೀ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ (Heavy Rain In Karnataka) ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದರೆ, ಕೆಲವೆಡೆ ಯೆಲ್ಲೋ ಅಲರ್ಟ್ ಘೋಸಿಸಲಾಗಿದೆ. 


COMMERCIAL BREAK
SCROLL TO CONTINUE READING

ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಕೆಲವೆಡೆ ಬಿರುಗಾಳಿಯಿಂದ ಕೂಡಿದ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ನಿರೀಕ್ಷೆಯಿದೆ. ಉತ್ತರ ಕನ್ನಡದಲ್ಲಿ ಜೂನ್ 11ರವರೆಗೆ 200 ಮಿ.ಮೀ.ಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Meteorological department forecast) ನೀಡಿದೆ.


ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದೆ. ಕರಾವಳಿ , ಉಡುಪಿ, ಉತ್ತರಕನ್ನಡ , ಕೊಪ್ಪಳ, ಬೆಳಗಾವಿ, ಧಾರವಾಡ , ಗದಗ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. 


ಇದನ್ನೂ ಓದಿ- ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ


ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: 
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಬಿರುಗಾಳಿ ಸಹಿತ ಭಾರೀ ಮಳೆ (Heavy Rain In Bengaluru) ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. 


ಇದನ್ನೂ ಓದಿ-  ಕಾಂಗ್ರೆಸ್ ನಲ್ಲಿ ಹಿರಿಯರನ್ನ ಪರಿಗಣಿಸುತ್ತಿಲ್ಲ : ಪರಮೇಶ್ವರ್ ಹೇಳಿದ್ದೇನು?


ಗಂಟೆಗೆ 45 ರಿಂದ 55 ಕಿ.ಮೀ. ವೇಗದಲ್ಲಿ ಭಾರೀ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.