ತಿಮ್ಮಪ್ಪನ ಭಕ್ತರ ಗಮನಕ್ಕೆ..! ತಿರುಪತಿಯಲ್ಲಿ ಭಾರೀ ಮಳೆ ಸಾಧ್ಯತೆ, ಎಚ್ಚರವಹಿಸುವಂತೆ ಡಿಸಿ ಸೂಚನೆ..
ಯಾವುದೇ ಪ್ರಾಣಹಾನಿ, ಜಾನುವಾರು, ಆಸ್ತಿಪಾಸ್ತಿಗಳ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳುವಂತೆ ಹಾಗೂ ಯಾವುದೇ ತುರ್ತು ಪರಿಸ್ಥತಿ ಬಂದರು ಎದುರಿಸಲು ಸಿದ್ದವಾಗಿರುವಂತೆ ತಿರುಪತಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್ವರ್ ಅವರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.
Tirupati rain news : ಯಾವುದೇ ಪ್ರಾಣಹಾನಿ, ಜಾನುವಾರು, ಆಸ್ತಿಪಾಸ್ತಿಗಳ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳುವಂತೆ ಹಾಗೂ ಯಾವುದೇ ತುರ್ತು ಪರಿಸ್ಥತಿ ಬಂದರು ಎದುರಿಸಲು ಸಿದ್ದವಾಗಿರುವಂತೆ ತಿರುಪತಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್ವರ್ ಅವರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಭಾರತೀಯ ಹವಾಮಾನ ಇಲಾಖೆಯು ಮುಂದಿನ ದಿನಗಳಲ್ಲಿ ವಾಯು ಭಾರ ಕುಸಿತದಿಂದಾಗಿ ತೀವ್ರ ಮಳೆಯಾಗುವ ಮೂನ್ಸೂಚನೆಯನ್ನು ನೀಡಿದೆ ಅಂತ ತಿಳಿದ್ದಾರೆ. ಅಲ್ಲದೆ, ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಕಾನ್ಫರೆನ್ಸ್ ನಲ್ಲಿ, ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು..
ಇನ್ನು ಗ್ರಾಮ ಮತ್ತು ನಗರ ಪ್ರದೇಶಗಳಿಗೆ ಭೇಟಿ ನೀಡಿ ಮುಚ್ಚಿದ ಚರಂಡೀ, ತೆರೆವುಗೊಳಿಸಲು ಮತ್ತು ಸುರಕ್ಷಿತ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಧಿಕಾರಗಳಿಗೆ ಸಲಹೆ ನೀಡಿದರು. ಸಮುದ್ರದ ತಪ್ಪಲಿನಲ್ಲಿ ಇರುವವರಿಗೆ ಹಾಗೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ಪರಿಸ್ಥಿತಿ ಸರಿಯಾಗಿ ಇದೆಯೇ ಎಂದು ಮೇಲ್ವೀಚಾರಣೆ ಮಾಡಿ ಖಚಿತಪಡಿಸಿಕೊಳಲು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದರು.
ಭಾರೀ ಮಳೆ ಹಿನ್ನೆಲೆ ಕಾಲುವೆಗಳ ಬಳಿ ಎಚ್ಚರಿಕೆಯ ಫಲಕಗಳನ್ನು ಇರಿಸಲು ಮತ್ತು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಅಂತಹ ಪ್ರದೇಶದಲ್ಲಿ ಸಂಚಾರ ನಿಷೇಧಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಒಟ್ಟಾರೆಯಾಗಿ ಈ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಆರ್&ಬಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.