ಲಕ್ಷ ದೀಪದಲ್ಲಿ ವಾಯುಭಾರ ಕುಸಿತ:ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆ

Rain Alert :ಎರಡು ದಿನಗಳ ಕಾಲ ಅಂದರೆ ಅಕ್ಟೋಬರ್ 12 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

Written by - Ranjitha R K | Last Updated : Oct 10, 2024, 01:30 PM IST
  • ಲಕ್ಷ ದೀಪದಲ್ಲಿ ವಾಯುಭಾರ ಕುಸಿತ
  • ಅಕ್ಟೋಬರ್ 12 ರವರೆಗೆ ರಾಜ್ಯದಲ್ಲಿ ಭಾರೀ ಮಳೆ
  • ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ
ಲಕ್ಷ ದೀಪದಲ್ಲಿ ವಾಯುಭಾರ ಕುಸಿತ:ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆ title=

ಬೆಂಗಳೂರು : ಲಕ್ಷ ದೀಪದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಅಕ್ಟೋಬರ್ 12 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.ಕರಾವಳಿ  ಮತ್ತು ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 12ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.  

ಲಕ್ಷ ದೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಅಂದರೆ ಅಕ್ಟೋಬರ್ 12 ರವರೆಗೆ ಭಾರೀ ಮಳೆಯಾಗಲಿದೆ.   ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. 

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರ : ಹೈಕೋರ್ಟ್ ಸೂಚನೆ

ಉತ್ತರ ಕನ್ನಡ,ದಕ್ಷಿಣ ಕನ್ನಡ,ಉಡುಪಿ ಶಿವಮೊಗ್ಗ,ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ, ಬಳ್ಳಾರಿಯಲ್ಲಿ ಅಕ್ಟೋಬರ್ 12 ರ ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿಯೂ ಮುಂದಿನ‌ ಎರಡು ದಿನಗಳ ಮಳೆಯ ಮುನ್ಸೂಚನೆ ನೀಡಲಾಗಿದೆ. 

ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಜೋರಾಗಿದೆ. 2 ದಿನದಲ್ಲಿ ಸುಮಾರು 10 ಇಂಚಿನಷ್ಟು ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಸುರಿದ ಭಾರೀ ಮಳೆಗೆ ವಾಹನ ಸವಾರರ ಪರದಾಟ ಪಡುವಂತಾಗಿದೆ. ಭಾರೀ‌ ಮಳೆಯಿಂದ ಗುಡ್ಡ, ಮರಗಳು ರಸ್ತೆಗೆ ಬಿದ್ದಿವೆ. ಚಾರ್ಮಾಡಿ ಘಾಟಿಯಲ್ಲಿ 2 ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಹರಿಯುತ್ತಿದ್ದು, ರಸ್ತೆ ಹಳ್ಳದ ರೀತಿಯಲ್ಲಿ ಮಾರ್ಪಟ್ಟಿದೆ.

ಇದನ್ನೂ ಓದಿ : ಇಬ್ಬರು ಮಾಜಿ ಸಿಎಂ ವಿರುದ್ಧ ಹನಿಟ್ರ್ಯಾಪ್‌! ಮುನಿರತ್ನ ವಿರುದ್ಧ ಸಂತ್ರಸ್ತೆಯ ಸ್ಫೋಟಕ ಹೇಳಿಕೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News