Karnataka weather report : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಏಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಂಡಮಾರುತದ ನೇರ ಪರಿಣಾಮ ರಾಜ್ಯದ ಮೇಲೆ ಆಗದಿದ್ದರೂ, ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಲಾಗಿದೆ.  
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ. 


COMMERCIAL BREAK
SCROLL TO CONTINUE READING

ಈ ಬಾರಿ ಮುಂಗಾರು ಕೈಕೊಟ್ಟಿತ್ತಾದರೂ ಹಿಂಗಾರು ಚುರುಕುಗೊಂಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ  ಆಗಾಗ ಭಾರೀ ಮಳೆಯಾಗುತ್ತಿದೆ. ಈ ನಡುವೆ ಚಂಡ ಮಾರುತದ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ.  ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವು ಕಳದೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 


ಇದನ್ನೂ ಓದಿ : ಮೊಟ್ಟ ಮೊದಲ ಬಾರಿಗೆ 50 ಲಕ್ಷ ಗಡಿ ದಾಟಿದ ಚಾರ್ ಧಾಮ್ ಭಕ್ತರ ಸಂಖ್ಯೆ!


ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಬೀಳಲಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.


ಚಂಡಮಾರುತದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಇಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತದ ಹಿನ್ನೆಲಯಲ್ಲಿ ಭಾರೀ ಗಾಳಿ ಮಳೆ  ಎಚ್ಚರಿಕೆ ನೀಡಲಾಗಿದೆ. 


ಇದನ್ನೂ ಓದಿ : ಈ ಭಾಗಕ್ಕೆ ಅಪ್ಪಳಿಸಲಿದೆ ತೇಜ್ ಚಂಡಮಾರುತ! ಗುಡುಗು-ಮಿಂಚಿನ ಆರ್ಭಟದ ಜೊತೆ ಜಲಪ್ರಳಯದ ಮುನ್ನೆಚ್ಚರಿಕೆ


ಆದರೆ ಕೇರಳ ಕರಾವಳಿಯಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳ ಕರಾವಳಿಯಲ್ಲಿ ಅಂದರೆ ವಿಝಿಂಜಂನಿಂದ ಕಾಸರಗೋಡುವರೆಗೆ ಹಾಗೂ ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.