ಬೆಂಗಳೂರು : ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮುಂದುವರೆಯಲಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 


COMMERCIAL BREAK
SCROLL TO CONTINUE READING

ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ, ಅಲ್ಲದೆ, ಮುಂದಿನ 2 ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಇಂದು ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 115.6 ಮಿ.ಮೀ ನಿಂದ 204.4 ಮಿಮಿ ಮಳೆ ಆಗುವ ಸಾಧ್ಯತೆ ಇದೆ. 


ಇದನ್ನೂ ಓದಿ : ಕಾಂಗ್ರೆಸ್ ಮುಕ್ತ ಕರ್ನಾಟಕದತ್ತ ಸಿದ್ದರಾಮಯ್ಯ ಹೆಜ್ಜೆ ಇಟ್ಟಿದ್ದಾರೆಯೇ?: ಬಿಜೆಪಿ


ಮೈಸೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮೈಸೂರು ಕೊಡಗು ಜಿಲ್ಲೆಯಲ್ಲಿ ಸುಮಾರು 64.5 ರಿಂದ 115.5 ಮಿ.ಮೀ ಮಳೆ ಸಾಧ್ಯತೆ ಇದೆ. ನಾಳೆ ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 64.5ರಿಂದ 115.5 ಮಿ.ಮೀ ಭಾರೀ ಮಳೆ‌ ಸಾಧ್ಯತೆ ಇದೆ. 


ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಮೋಡ ಮುಸುಕಿದ ವಾತಾವರಣ ಮತ್ತು ಹಗುರ ಮಳೆ ಆಗಲಿದೆ. ಕರಾವಳಿ ತೀರದಲ್ಲಿ 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.  


ಇದನ್ನೂ ಓದಿ : Karnataka Heavy Rain : ಜುಲೈ 17 ರವರೆಗೂ ರಾಜ್ಯಾದ್ಯಂತ ಭಾರಿ ಮಳೆ : ಹವಾಮಾನ ಇಲಾಖೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ