ಬೆಂಗಳೂರು: ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆಯಲ್ಲಿ ಜನತೆ ಭರದಿಂದ ಪಾಲ್ಗೊಂಡಿದ್ದರೆ, ಮತ್ತೊಂದೆಡೆ ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


COMMERCIAL BREAK
SCROLL TO CONTINUE READING

ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಮತದಾನಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನದಿಂದ ರಾತ್ರಿ 10 ಗಂಟೆಯವರೆಗೂ ಬೆಂಗಳೂರು ಸೇರಿದಂತೆ ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಪಶ್ಚಿಮಘಟ್ಟ ವ್ಯಾಪ್ತಿಯ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. 


ಬುಧವಾರವೂ ಸಹ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವೆಡೆ ಮನೆಗೈಗೆ ನಿರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು.