ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರದ ಜೊತೆಗೆ, ಕರ್ನಾಟಕ, ಕೇರಳ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಮುಂದಿನ 2-3 ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಭಾರತೀಯ ಹವಾಮಾನ ಇಲಾಖೆ(India Meteorological Department), ಅರಬ್ಬೀ ಸಮುದ್ರದಲ್ಲಿ ಎದ್ದಿರುವಂತ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ, ಮುಂದಿನ ಎರಡು ಮೂರು ದಿನಗಳು ಅಂದ್ರೇ, ಮೇ.14-15 ರಂದು ಕೇರಳ, ಲಕ್ಷದ್ವೀಪ ಭಾಗದಲ್ಲಿ ಭಾರೀ ಮಳೆ ಆಗುವ ಸಂಭವ ಇದೆ ಎಂದು ತಿಳಿಸಿದೆ.
Fishermen are advised not to venture out to the southeast Arabian Sea and adjoining Maldives, Comorin and Lakshadweep area, Kerala coast from morning of 13 May and east central Arabian sea and along and off Karnataka-Goa and Maharashtra and Goa coasts from 14th Night.
— India Meteorological Department (@Indiametdept) May 12, 2021
ಇದನ್ನೂ ಓದಿ : ಹರಿಯುವ ನೀರಲ್ಲಿ ಕರೋನಾ ಹರಡುತ್ತಾ..? ತಜ್ಞರ ಉತ್ತರ ಏನು..?
ಮೇ.15ರ ಸುಮಾರಿಗೆ ದಕ್ಷಿಣ ಅರಬ್ಬೀ ಸಮುದ್ರ(Arabian Sea)ದಲ್ಲಿ ಏಳಿರುವ ತೌಕ್ತೆ ಚಂಡಮಾರುತದ ಪರಿಣಾವಾಗಿ, ಮೇ.16ರ ಸುಮಾರಿಗೆ ಕೇರಳ, ಕರ್ನಾಟಕ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಹೀಗಾಗಿಯೇ ಮಂಗಳೂರಿನಲ್ಲಿ ಕರಾವಳಿ ಕಾವಲುಪಡೆ ಇಂದಿನಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : Oxygen: ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ನಮಗೇಕೆ ಆಮ್ಲಜನಕ ಕೊಡ್ತಿಲ್ಲ-ಕುಮಾರಸ್ವಾಮಿ ಆಕ್ರೋಶ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.