ರಾಜ್ಯದಲ್ಲಿ ಭಾರೀ ಮಳೆಯಿಂದ ಅನಾಹುತ: ಜಿಲ್ಲಾಧಿಕಾರಿಗಳ ಸಭೆ ಕರೆದ ಸಿಎಂ ಬೊಮ್ಮಾಯಿ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ ಮತ್ತು ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಅನೇಕ ಸಮಸ್ಯೆಗಳು ಸೃಷ್ಟಿಯಾಗಿವೆ. ಅಷ್ಟೇ ಅಲ್ಲದೆ, ಪ್ರಕೃತಿ ವಿಕೋಪದಿಂದ ಬೆಟ್ಟ ಗುಡ್ಡಗಳು ಧರೆಗುರುಳಿತ್ತಿವೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕನ ಮಾಡಲು ಅತಿವೃಷ್ಠಿಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ಕರೆದಿದ್ದಾರೆ.
ಇಂದು ಮಧ್ಯಾಹ್ನ 1:30 ಕ್ಕೆ ದೇವನಹಳ್ಳಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಇದನ್ನೂ ಓದಿ: ಕಾಳಸರ್ಪ ದೋಷದಿಂದ ಮನಸ್ಸಿಗೆ ಶಾಂತಿ ಇಲ್ಲವೇ? ಹಾಗಾದ್ರೆ ಶ್ರಾವಣದಲ್ಲಿ ಈ ಪೂಜೆ ಮಾಡಿ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ ಮತ್ತು ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಜಿಲ್ಲಾಧಿಕಾರಿಗಳು, ಸಿಇಒ, ಎಸ್‌ಪಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದು, ಸುರಿಯುತ್ತಿರುವ ಮಳೆ ಮತ್ತು ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಈ ಸಭೆಯಲ್ಲಿ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಸಹ ಭಾಗಿಯಾಗಲಿದ್ದಾರೆ.
ಈಗಾಗಲೇ ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ದೇಶದ ಹಲವಾರು ರಾಜ್ಯಗಳಲ್ಲಿ ಮಳೆಯ ಅಬ್ಬರ ಜೋರಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಈಗಾಗಲೇ 99 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೊಂದೆಡೆ ಗುಜರಾತ್, ಛತ್ತೀಸ್‌ಗಡ, ರಾಜಸ್ಥಾನ, ತೆಲಂಗಾಣದಲ್ಲೂ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ.
ಇದನ್ನೂ ಓದಿ: ಬೇರೆ ರಾಜ್ಯಗಳಲ್ಲಿಯೂ ರೈತರು ತಮ್ಮ ಬೆಳೆ ಮಾರಬಹುದು, ಕೇಂದ್ರ ಸರ್ಕಾರದಿಂದ ಮಹತ್ವದ ಸೇವೆ ಆರಂಭ
ಇನ್ನು ದೇಶದ ಹಲವಾರು ಭಾಗಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನೆರೆಯ ರಾಜ್ಯ ಕೇರಳದ ನಾಲ್ಕು ಜಿಲ್ಲೆಗಳಾದ ಕಾಸರಗೋಡು, ಇಡುಕ್ಕಿ, ಕಣ್ಣೂರು ಮತ್ತು ವಯನಾಡುವಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.