Rain in Karnataka : ರಾಜ್ಯಕ್ಕೆ ಮುಂಗಾರು ಪ್ರವೇಶದಿಂದ ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ!

ಇಂದು ಕೂಡ ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 

Last Updated : Jun 7, 2021, 12:12 PM IST
  • ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು
  • ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿಗೂ ಆಗಮಿಸಿದೆ
  • ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ
Rain in Karnataka : ರಾಜ್ಯಕ್ಕೆ ಮುಂಗಾರು ಪ್ರವೇಶದಿಂದ ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ! title=

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಈಗಾಗಲೇ ಕೇರಳವನ್ನು ಪ್ರವೇಶಿಸಿರುವ ನೈರುತ್ಯ ಮುಂಗಾರು ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿಗೂ ಆಗಮಿಸಿದೆ. ಹೀಗಾಗಿ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ. 

ಭಾರೀ ಮಳೆ(Heavy Rain)ಯಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ : Unlock in Karnataka : ರಾಜ್ಯದಲ್ಲಿ  ಅನ್‌ಲಾಕ್ ; ಸಬ್ ರಿಜಿಸ್ಟರ್ ಕಚೇರಿಗಳು ತೆರೆಯಲು ಸರ್ಕಾರ ಆದೇಶ!

ಇಂದು ಕೂಡ ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್(Orange Alert)​ ಘೋಷಿಸಲಾಗಿದೆ. 

ಇದನ್ನೂ ಓದಿ : S.R. Bommai Birthday: ಐತಿಹಾಸಿಕ ಎಸ್.ಆರ್.ಬೊಮ್ಮಾಯಿ ಪ್ರಕರಣ ಸ್ಮರಿಸುತ್ತಾ...

ಕರ್ನಾಟಕ(Karnataka)ದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟಿಸಲಿದೆ. ಮುಂಗಾರು ಆಗಮನವಾದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಮಲೆನಾಡು, ಕರ್ನಾಟಕದ ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಕಳೆದೆರಡು ದಿನಗಳಿಂದ ಮಳೆಯ ಬೀಳುತ್ತಿದೆ.

ಇದನ್ನೂ ಓದಿ : KSRTC-BMTC : ರಾಜ್ಯದಲ್ಲಿ ಅನ್​​ಲಾಕ್​ ಗೆ ಸಿದ್ಧತೆ : ಸರ್ಕಾರದಿಂದ ಸಾರಿಗೆ ನೌಕರರಿಗೆ ಬುಲಾವ್!

ಮಳೆಯಿಂದ ಇಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ 'ಯಲ್ಲೋ ಅಲರ್ಟ್​'(Yellow Alert) ಘೋಷಿಸಲಾಗಿದೆ.

ಇದನ್ನೂ ಓದಿ : CN Ashwath Narayan : 'ಬಿಎಸ್‌ವೈ ಸಂಪುಟದಲ್ಲಿ ಶಾಸಕ ಮುನಿರತ್ನಗೆ ಸಿಗುತ್ತೆ ಅವಕಾಶ'

ಮಲೆನಾಡು, ಕರಾವಳಿ(Coastal Areas) ಮಾತ್ರವಲ್ಲದೆ ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ಎಂಟ್ರಿ ನೀಡಲು ಮೂರ್ನಾಲ್ಕು ದಿನಗಳು ಬೇಕಾಗುತ್ತದೆ ಎನ್ನಲಾಗಿತ್ತು. ಆದರೆ, ಜೂನ್ 5ಕ್ಕೇ ಕರ್ನಾಟಕಕ್ಕೆ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. 

ಇದನ್ನೂ ಓದಿ : `ಹೈಕಮಾಂಡ್ ಸೂಚಿಸಿದ ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ..!'

ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(Meteorological Department Karnataka) ತಿಳಿಸಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News